Breaking News

ಬೈಕ್ ಅಪಘಾತ ; ಜರ್ಮನ್ ದೇಶದ ಪ್ರವಾಸಿಗನ ಸಾವು


ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಹುಬ್ಬಳ್ಳಿ ರಸ್ತೆಯ ಹೊರವಲಯದಲ್ಲಿ ಬೈಕ್ ಚಲಾಯಿಸುತ್ತಿದ್ದ ಜರ್ಮನ್ ದೇಶದ ಪ್ರವಾಸಿಗನ ಚಾಲನೆಯ ನಿಯಂತ್ರಣ ತಪ್ಪಿ ತಗ್ಗಿನಲಿದ್ದ ಮರಕ್ಕೆ ಡಿಕ್ಕಿ ಹೊಡೆದು ಗಂಭಿರ ಸ್ವರೂಪದ ಗಾಯಗಳಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ.


ಕ್ರಿಸ್ಟಿಯನ್ (43) ಎಂ¨ ಜರ್ಮನ್ ದೇಶದ ಪ್ರಜೆಯು ಗುಜರಾತ್ ನೋಂದಣಿಯ ಮೋಟಾರ್‌ಬೈಕಿನಲ್ಲಿ ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆಗೆ ಸವಾರಿ ಹೊರಟವನು ಪಟ್ಟಣದ ನವದುರ್ಗ ಗ್ಯಾರೇಜ್ ಪಕ್ಕದ ತಗ್ಗಿನಲ್ಲಿ ಮರವೊಂದಕ್ಕೆ ಡಿಕ್ಕಿ ಹೊಡೆದು ತನ್ನ ತಲೆ, ತೋಳಿಗೆ ಗಂಭೀರ ಸ್ವರೂಪದ ಗಾಯ ಮಾಡಿಕೊಂಡಿದ್ದಲ್ಲದೇ ಬಲ ಪಕ್ಕೆಯ ಎಲುಬು ಮುರಿದು ತೀವ್ರ ಸ್ವರೂಪದ ಗಾಯಗೊಂಡವನನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾನೆ.


ಮೃತಪಟ್ಟ ವ್ಯಕ್ತಿಯು ವಿದೇಶಿ ಪ್ರಜೆಯಾಗಿದ್ದು ಅಲ್ಲದೇ ತೀವ್ರ ಸ್ವರೂಪದ ಗಾಯಗಳಾಗಿ ಸಾವನ್ನಪ್ಪಿರುವುದರಿಂದ ಮುಂದಿನ ಕ್ರಮ ಜರುಗಿಸಲು ಆತನ ಕುಟುಂಬಸ್ಥರು ಬರುವವರೆಗೆ ದೇಹವನ್ನು ಶೈತ್ಯಾಗಾರದಲ್ಲಿ ಇಡಬೇಕಿದೆ. ಈ ವ್ಯವಸ್ಥೆ ಯಲ್ಲಾಪುರ ತಾಲೂಕಾ ಆಸ್ಪತ್ರೆಯಲ್ಲಿ ಇಲ್ಲದಿರುವ ಕಾರಣ ದೇಹವನ್ನು ಕಾರವಾರಕ್ಕೆ ರವಾನಿಸಲಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *