Breaking News

ಯಲ್ಲಾಪುರದ ಮಂಜುನಾಥ ನಗರದಲ್ಲಿ ಕುಡಿತದ ಪರಿಣಾಮ ನೇಣು ಬಿಗಿದು ವ್ಯಕ್ತಿಯೊಬ್ಬನ ಆತ್ಮಹತ್ಯೆ


ಪ್ರತಿಧ್ವನಿ,ಯಲ್ಲಾಪುರ : ವಿಪರೀತ ಕುಡಿತದ ಪರಿಣಾಮ ಮತ್ತು ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ವ್ಯಕ್ತಿಯೋರ್ವ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಮಂಜುನಾಥನಗರದಲ್ಲಿ ನಡೆದಿದೆ.


ಪಟ್ಟಣದ ಮಂಜುನಾಥನಗರ ನಿವಾಸಿ ಸುರೇಶ ದಾಮೋದರ ನಾಯ್(೫೫) ಎಂಬಾತನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವನಾಗಿದ್ದು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು ವಿಪರೀತ ಸಾರಾಯಿ ಕುಡಿಯುವ ಚಟ ಹೊಂದಿದ್ದು ಅಲ್ಲದೇ ಕೆಲದಿನಗಳಿಂದ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡವನು ತನ್ನ ಮಲಗುವ ಕೋಣೆಯ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎಂಬುದಾಗಿ ಮೃತನ ಮಗ ಅನಿಲ್ ಎಂಬಾತನು ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಿಸಿರುತ್ತಾನೆ.
ದೂರು ದಾಖಲಿಸಿಕೊಂಡ ಯಲ್ಲಾಪುರ ಪೊಲೀಸರು ಮುಂದಿನ ಕ್ರಮ ಕೈಗೊಂಡಿರುತ್ತಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪಟ್ಟಣ ಸಮೀಪದ ಅರಣ್ಯದಲ್ಲಿ ಶ್ರೀಗಂಧ ಚೋರರ ಕರಾಮತ್ತು ಗಂಧದ ಮರ ಕಡಿದ ಕಳ್ಳರು.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಸಮೀಪದಲ್ಲಿರುವ ನಾರಾಯಣಪುರ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಕಳ್ಳರು ತಮ್ಮ ಕೈಚಳಕ ತೋರಿದ್ದು ಗುಣಮಟ್ಟದ ಮತ್ತು …

Leave a Reply

Your email address will not be published. Required fields are marked *