Breaking News

ಯಲ್ಲಾಪುರ ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ ಎಣ್ಣೆ ಸೀಝ್..!!

ಪ್ರತಿಧ್ವನಿ, ಯಲ್ಲಾಪುರ- ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ಎಣ್ಣೆ ಕೇಸುಗಳ ಸಂಖ್ಯೆ ಕೂಡ ಹೆಚ್ಚುತ್ತಿದೆ.

       ಮುಂಡಗೋಡ್ ಪಟ್ಟಣದ ಅಕ್ಷಯ ಹೋಟೆಲ್ ಎದುರು ಪ್ರವೀಣ್ ಕುಮಾರ್ ಶೆಟ್ಟಿ ಎಂಬುವರಿಗೆ ಸೇರಿದ ದ್ವಿಚಕ್ರ ವಾಹನ ತಪಾಸಣೆ ನಡೆಸಿ 10.260 ಲೀಟರ್ ಮಧ್ಯ ಮತ್ತು 20.650 ಲೀಟರ್ ಬಿಯರ್ ಪತ್ತೆ ಆಗಿದ್ದು ಅಂದಾಜು ಮೌಲ್ಯ 94,865 ರು ಆಗಿರುತ್ತದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ  ಒಪ್ಪಿಸಲಾಗಿದೆ.

   ಅಬಕಾರಿ ಜಂಟಿ ಆಯುಕ್ತ ಮಂಗಳೂರು ವಿಭಾಗ ಮತ್ತು ಅಬಕಾರಿ ಉಪ ಆಯುಕ್ತ ಕಾರವಾರ ಹಾಗೂ ಅಬಕಾರಿ ಉಪ ಅಧೀಕ್ಷಕ ಯಲ್ಲಾಪುರ ಉಪ ವಿಭಾಗ. ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಯಲ್ಲಾಪುರ ವಲಯ ನಿರೀಕ್ಷಕ ಪ್ರಶಾಂತ್ ಪಾಟೀಲ್ ಉಪ ನಿರೀಕ್ಷಕ ಅನಿಲ್ ಕೊಕಟನೂರ್ ಮತ್ತು ಸಿಬ್ಬಂದಿಗಳಾದ ಅಭಿಷೇಕ್ ಬೋರಕರ ,ಸಿದ್ಧಾರೂಡ ಬನ್ಸೋಡೆ, ಮೋಹನ್ ಮೊಗೇರ, ತಿಪ್ಪಣ್ಣ ಹುಲ್ಲೂರ್, ಪ್ರವೀಣ್ ಹೊಸಕೋಟೆ, ಸಾಧಿಕ್ ಕಿತ್ತೂರ್  ಭಾಗವಹಿಸಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ದೇಶದ ಪ್ರಧಾನಿ,ಅರಣ್ಯ ಸಚಿವರು ಮತ್ತು ಸಚಿವಾಲಯದ ಕಾರ್ಯದರ್ಶಿಯವರಿಗೆ ಪಶ್ಚಿಮ ಘಟ್ಟಗಳ ವಿಚಾರದಲ್ಲಿ ಮದ್ಯ ಪ್ರವೇಶಿಸುವಂತೆ ಚಂದ್ರಕಾಂತ ಕೊಚರೇಕರ್ ಮನವಿ

ಪ್ರತಿಧ್ವನಿ ಯಲ್ಲಾಪುರ :  ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಸಂಬಂಧ 27-07-2026ರಂದು …

Leave a Reply

Your email address will not be published. Required fields are marked *