Breaking News

ರಾಜ್ಯದ ಪ್ರಗತಿಗೆ ಬಿಜೆಪಿ . ಕ್ಷೇತ್ರದ ಅಭಿವೃದ್ಧಿಗೆ ಶಿವರಾಮ ಹೆಬ್ಬಾರ್. ಬಿಜೆಪಿ ಗೆ ಮತ ನೀಡಿ – ಪ್ರಮೋದ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ – ಭ್ರಷ್ಟಾಚಾರ ಮುಕ್ತ ಅಭಿವೃದ್ಧಿ ಪರ ಆಡಳಿತ ನೀಡಿ ಜನ ಮಾನಸದಲ್ಲಿ ನೆಮ್ಮದಿಯ ವಾತವರಣ ಮೂಡಿಸಿದ ರಾಷ್ಟ್ರ ಭಕ್ತ ಬಿಜೆಪಿ ಆಡಳಿತ ರಾಜ್ಯದಲ್ಲಿ ಮತ್ತೊಮ್ಮೆ ಕಾಣಲಿದ್ದೇವೆ. ವಿಶೇಷವಾಗಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಸಾಮಾನ್ಯರ ನಾಯಕರೆಂದೇ ಹೆಸರಾದ ಅರಬೈಲ್ ಶಿವರಾಮ ಹೆಬ್ಬಾರ್ ಅವರು ಅತ್ಯಧಿಕ ಮತಗಳ ಅಂತರದಿಂದ ಗೆದ್ದು ಇತಿಹಾಸ ಸೃಷ್ಟಿಸಲಿದ್ದಾರೆ.ಜೊತೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದ್ದು ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಪ್ರಮೋದ್ ಹೆಗಡೆ ಹೇಳಿದರು.
ಅವರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಟಿ ಯಲ್ಲಿ ಹೇಳಿದರು.


ಪ್ರಜ್ಞಾವಂತರು ಮತ್ತು ಮತದಾರರು ನಮ್ಮ ಪ್ರನಾಣಳಿಕೆಯ ಅಂಶಗಳನ್ನು ಮೆಚ್ಚಿದ್ದು ರಾಜ್ಯದ ಅಭಿವೃದ್ಧಿ ಗೆ ಪೂರಕವಾಗಿರುವುದಾಗಿ ಮತದಾರ ಪ್ರಶಂಸಿಸಿದ್ದಾನೆ ಜನಪರ ಜನಪ್ರಿಯ ಯೋಜನೆಗಳನ್ನು ಘೋಷಿಸಿದ್ದು ಶ್ರೀಸಾಮಾನ್ಯರಿಗೆ ಒಪ್ಪಿತವಾಗಿದೆ. ಪ್ರಧಾನಿ ಮೋದಿಯವರ ರಾಜ್ಯ ಚುನಾವಣಾ ಪ್ರವಾಸದಿಂದ ಮೂವತ್ತಕ್ಕು ಅಧಿಕ ಸಂಖ್ಯೆಯ ಸೀಟುಗಳು ಗೆಲುವಿನ ಸಂಖ್ಯೆಯನ್ನು ಹೆಚ್ಚಿಸಲಿದೆ ಎಂದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್, ನಗರ ಘಟಕದ ಪ್ರಮುಖ ರಾಮು ನಾಯ್ಕ್, ಪ್ರಧಾನ ಕಾರ್ಯದರ್ಶಿಗಳಾದ ಡಾ,ರವಿಭಟ್ ಬರಗದ್ದೆ, ಪ್ರಸಾದ್ ಹೆಗಡೆ ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *