
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ,ಯಲ್ಲಾಪುರ – ಪಟ್ಟಣದ ಬಿಜೆಪಿ ಕಚೇರಿಯಿಂದ ನೂರಾರು ಸಂಖ್ಯೆಯ ಅಭಿಮಾನಿ ಕಾರ್ಯಕರ್ತರು ಒಳಗೊಂಡಂತೆ ಬಹತ್ ರ್‍ಯಾಲಿ ನಡೆಯಿತು.

ಪಟ್ಟಣದ ಪ್ರಮುಖ ರಸ್ತೆಯಲ್ಲಿ ಗೋವಾ ರಾಜ್ಯದ ಸಮಾಜ ಕಲ್ಯಾಣ ಸಚಿವ ಸುಭಾಷ್ ಪಾಲ್ ದೇಸಾಯಿ, ಬಿಜೆಪಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್ ಗಾಂವ್ಕರ್ ನೇತೃತ್ವದಲ್ಲಿ ಪಕ್ಷದ ಚುನಾವಣಾ ವೀಕ್ಷಕ ರವಿ ಹೆಗಡೆ ಹೂವಿನ ಮನೆ, ನಗರ ಘಟಕ ಪ್ರಮುಖ ರಾಮುನಾಯ್ಕ್ ಹಾಗು ಪಕ್ಷದ ಪದಾಧಿಕಾರಿಗಳು, ಪಟ್ಟಣ ಪಂಚಾಯತ್ ಅಧ್ಯಕ್ಷೆ, ಉಪಾಧ್ಯಕ್ಷೆ, ಮತ್ತು ಸದಸ್ಯರು ಅಭಿಮಾನಿಗಳು, ಕಾರ್ಯಕರ್ತರು, ಸಾರ್ವಜನಿಕರು ರ‍್ಯಾಲಿ ಯಲ್ಲಿ ಪಾಲ್ಗೊಂಡು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಪರ ಮತಯಾಚಿಸಿದರು.
Prathidvani Yellapura