Breaking News

ವಿಶ್ವದರ್ಶನ ಆಂಗ್ಲ ಮಾದ್ಯಮ ಪ್ರೌಡಶಾಲೆ 96.88%

ಪ್ರತಿಧ್ವನಿ, ಯಲ್ಲಾಪುರ – ಕುಮಾರಿ ಸಹನಾ ಗೋಪಾಲಕೃಷ್ಣ ಭಾಗ್ವತ್ 625 ಅಂಕಕ್ಕೆ 622 ಅಂಕ ಪಡೆದು ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾಳೆ.
ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ _2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ 96.88% ರಷ್ಟಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟೂ 64 ವಿದ್ಯಾರ್ಥಿಗಳಲ್ಲಿ 62 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕುಮಾರಿ ಸಹನಾ ಗೋಪಾಲಕೃಷ್ಣ ಭಾಗ್ವತ್ 625 ಅಂಕಕ್ಕೆ 622 ಅಂಕ (99.5%) ಗಳಿಸುವ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಹಾಗೂ ಶಾಲೆಗೆ ಮೊದಲ ಸ್ಥಾನ , ಧಾತ್ರಿ ರವಿಪ್ರಸನ್ನ ಹೆಬ್ಬಾರ 617ಅಂಕ(98.7%) ಪಡೆದು ದ್ವಿತೀಯ ಸ್ಥಾನ, ಭವಾನಿ ಎನ್. ಬಿ. ಗೌಡರ 615 ಅಂಕ(98.4%) ಪಡೆದು ತೃತೀಯ ಸ್ಥಾನ ಪಡೆದಿರುತ್ತಾರೆ.
ಎಸ್.ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಪಾಲಕರಿಗೆ ಆಡಳಿತ ಮಂಡಳಿಯವರು, ವಿಭಾಗ ಮುಖ್ಯಸ್ಥರು ಹಾಗೂ ಶಿಕ್ಷಕ ವೃಂದದವರು ಹಾರ್ಧಿಕವಾಗಿ ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *