
ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ.94 ಆಗಿದ್ದು, ಪೃಥ್ವಿ ಎಂ.ಜೋಷಿ (96.8%), ಅನುಷಾ ಎಸ್. ಭಟ್ಟ (96.16%), ಚಿನ್ಮಯ ವಿ. ವೈದ್ಯ (93.92%) ಅನುಕ್ರಮ ಸ್ಥಾನ ಪಡೆದಿದ್ದಾರೆ. ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ಐವರು ಹಾಗೂ ಹಿಂದಿಯಲ್ಲಿ ಮೂವರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ.
ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೊಣೇಮನೆ, ಗೌರವ ಕಾರ್ಯದರ್ಶಿ ನರಸಿಂಹ ಕೋಣೇಮನೆ, ಮುಖ್ಯಾಧ್ಯಾಪಕಿ ಮುಕ್ತಾ ಶಂಕರ, ಶಿಕ್ಷಕ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
Prathidvani Yellapura