Breaking News

ಮದರ್ ಥೆರೆಸಾ ಆಂಗ್ಲ ಮಾದ್ಯಮ ಪ್ರೌಢಶಾಲೆ S.S.L.C ಪರೀಕ್ಷೆಯಲ್ಲಿ 95.23% ಪಲಿತಾಂಶ

ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಮದರ್ ಥೆರೆಸಾ ಆಂಗ್ಲ ಮಾಧ್ಯಮ ಶಾಲೆಯು ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 95.23% ಫಲಿತಾಂಶ ಗಳಿಸಿದೆ. ಒಟ್ಟು 42 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು 40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕುಮಾರಿ ಸೋನಿಯಾ ಭಾವೆ 625 ಕ್ಕೆ 617 ಅಂಕಗಳಿಸಿ ಪ್ರಥಮ ಸ್ಥಾನ ಗಳಿಸಿದ್ದು ಕುಮಾರಿ ಸಾತ್ವಿಕ ನಾಯ್ಕ 615 ಅಂಕಗಳೊಂದಿಗೆ ದ್ವಿತೀಯ, ಕುಮಾರ ಸುಶಾಂತ ಕೋಡ್ಕಣಿ 612 ಅಂಕಗಳದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.

ಉತ್ತಮ ಅಂಕ ಗಳಿಸಿ ಶಾಲೆಗು ಪೋಷಕರಿಗು ಮತ್ತು ಊರಿಗು ಒಳ್ಳೆಯ ಹೆಸರು ತಂದಿದ್ದು ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಭೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು ಪ್ರಶಂಸಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಹೆಸ್ಕಾಂ ಎದುರು ಸಾಮಾಜಿಕ ಕಾರ್ಯಕರ್ತ ತಾರನಾಥ್ ನಾಯ್ಕ್ ಮತ್ತು ತಂಡದಿಂದ ದಿಡೀರ್ ಪ್ರತಿಭಟನೆ.

ಪ್ರತಿಧ್ವನಿ ಯಲ್ಲಾಪುರ :  ಪಟ್ಟಣದ ಹೆಸ್ಕಾಂ ಕಚೇರಿ ಎದುರು ಸಾಮಾಜಿಕ ಕಾರ್ಯಕರ್ತ ತಾರಾನಾಥ ನಾಯ್ಕ್ ನೇತೃತ್ವದಲ್ಲಿ ಅಂಬೇಡ್ಕರ್ ಪರ್ವ ದಲಿತ …

Leave a Reply

Your email address will not be published. Required fields are marked *