Breaking News

ವಿಧನಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಲ್ಲಾಪುರದಲ್ಲಿ ಸಿ.ಆರ್.ಪಿ.ಎಫ್ ಯೋಧರು ಮತ್ತು ಪೊಲೀಸರ ಪಥಸಂಚಲನ….

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಶಾಂತಿ ಸುವ್ಯವಸ್ಥೆಯ ಭರವಸೆಗಾಗಿ ಸಿ.ಆರ್.ಪಿ.ಎಫ್. ಯೋಧರು ಮತ್ತು ಪೊಲೀಸ್ ಸಿಬ್ಬಂದಿಗಳು ಪಟ್ಟಣದ ಪ್ರಮುಖ ರಸ್ತೆಗಳೂ ಹಾಗೂ ತಾಲೂಕಿನ ಕಿರವತ್ತಿಯಲ್ಲಿ ಪಥ ಸಂಚಲನ ನಡೆಸಿ ಭದ್ರತೆಯ ಭರವಸೆ ತುಂಬಿದರು.


ಪಥ ಸಂಚಲನದಲ್ಲಿ ಯಲ್ಲಾಪುರ ಪಿಐ ರಂಗನಾಥ ನೀಲಮ್ಮನವರ್ ಭಾಗವಹಿಸಿ ಮುನ್ನೆಡೆಸಿದರು. ಪಿ.ಎಸ್.ಐಗಳಾದ ರವಿ ಗುಡ್ಡಿ, ಸುನಿಲ್, ಮಂಜುನಾಥ ಪಾಟೀಲ ಹಾಗೂ ಲತಾ ಕೆ ಪಥಸಂಚಲನದಲ್ಲಿ ಪಾಲ್ಗೊಂಡರು.

ಈ ಸುದ್ದಿಯ ವಿಡಿಯೋ ವೀಕ್ಷಣೆಗೆ ||ಪ್ರತಿಧ್ವನಿ|| ಯೂಟ್ಯೂಬ್ ಚಾನಲ್ ವೀಕ್ಷಣೆ ಮಾಡಿ. ಸಹಕರಿಸಲು ಪ್ರೋತ್ಸಹಿಸಲು ಸಬ್ ಸ್ಕ್ರೈಬ್ ಮಾಡಿ


ಪೊಲೀಸ್ ಠಾಣೆಯಿಂದ ಹೊರಟ ಪಥ ಸಂಚಲನದಲ್ಲಿ ೮೦ಕ್ಕೂ ಅಧಿಕ ಸಿ.ಆರ್.ಪಿ.ಎಫ್ ಯೋಧರು ಹಾಗೂ ಪೊಲೀಸರು ಭಾಗವಹಿಸಿದ್ದರು. ಪಟ್ಟಣದ ಅಂಬೇಡ್ಕರ್ ವೃತ್ತ, ರವೀಂದ್ರನಗರ, ಬೆಲ್ ರಸ್ತೆ ಹಾಗೂ ಪ್ರಮುಖ ರಸ್ತೆಗಳಲ್ಲಿ ಸಾಗಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *