Breaking News

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ನುಲಿಯ ಚಂದಯ್ಯ ಜಯಂತಿ ಆಚರಣೆ


ಪ್ರತಿಧ್ವನಿ ಯಲ್ಲಾಪುರ : ಪ್ರಸ್ತುತ ಸಮಾಜಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಎಲ್ಲರೊಂದೇ ಎನುವ ಭಾವ ಮತ್ತು ನುಲಿ ಚಂದಯ್ಯ ಅವರ ಕಾಯಕವೇ ದೇವರೆಂಬ ಭಕ್ತಿ ಅಳವಡಿಸಿಕೊಳ್ಳಬೇಕಿದೆ. ಸಮಾನತೆಯ ಸಂದೇಶ ಸಾರಿ ಅಂತಸ್ತಿನ ವ್ಯತ್ಯಯಕ್ಕು ಮನುಕುಲದ ನಡೆಗು ಸಂಬಂಧವಿಲ್ಲದೆ ಆದ್ಯಾತ್ಮದೊಂದಿಗೆ ಸಾಮಜಿಕ ನ್ಯಾಯದ ಪರ ಹೊಸ ಅಲೆಯನ್ನೆ ಎಬ್ಬಿಸಿ ಕೇರಳದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳನ್ನು ಪರಿಪಾಲಿಸೋಣ ಎಂದು ತಹಶಿಲ್ದಾರ ಗುರುರಾಜ ಹೇಳಿದರು.


ಅವರು ಪಟ್ಟಣದ ತಾಲೂಕು ಆಡಳಿತ ಸಭಾ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಮತ್ತು ನುಲಿಯ ಚಂದಯ್ಯ ಅವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಮಾತನಾಢಿದರು.


ಇಬ್ಬರೂ ಮಹಾ ಪುರುಷರ ಕುರಿತು ನಾಮಧಾರಿ ಸಮಾಜದ ಪ್ರಮುಖ ಸಂತೋಷ್ ನಾಯ್ಕ ಮತ್ತು ಹನುಮಂತ ಕೊರವರ ಮಾತನಾಡಿದರು.


ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್, ಗ್ರೇಡ್ 2 ತಹಶಿಲ್ದಾರ ಸಿ.ಜಿ. ನಾಯ್ಕ, ಪಟ್ಟಣ ಪಂಚಾಯತ್ ಸದಸ್ಯರಾದ ಸತೀಶ್ ಶಿವಾನಂದ ನಾಯ್ಕ, ಸೋಮೇಶ್ವರ ನಾಯ್ಕ, ಪ್ರಮುಖ ರವಿನಾಯ್ಕ್ ಇಂಜನಿಯರ್ ಅಶೋಕ ಕೊರವರ್, ಸತ್ಯಭ್ಯಾಮ ಶಿಕ್ಷಕಿ ಇನ್ನಿತರ ಅಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *