
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ: ಪಟ್ಟಣದ ಅಡಿಕೆ ಭವನದಲ್ಲಿ ಸುಜ್ಞಾನ ಸೇವಾ ಪೌಂಡೇಶನ್ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಮುದ್ದುಕೃಷ್ಣ ಪೋಟೊ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿ ಮಾತನಾಡಿದರು.

ಅಡಿಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ಆರ್.ವಿ.ಹೆಗಡೆ, ಆನಗೋಡು ಹಾಲು ಒಕ್ಕೂಟದ ಅಧ್ಯಕ್ಷ ಪ್ರಶಾಂತ ಸಭಾಹಿತ, ನಿವೃತ್ತ ತಹಶೀಲ್ದಾರ ಡಿ.ಜಿ.ಹೆಗಡೆ, ಜಿ.ಎಸ್.ಗಾಂವ್ಕರ ಮಾತನಾಡಿದರು.

ನಾಟಿವೈದ್ಯ ನಾರಾಯಣ ಹೆಗಡೆ ಗವೇಗುಳಿ ಹಾಗೂ ಸಾಮಾಜಿಕ ಕಾರ್ಯಕರ್ತ ಶಿವಲಿಂಗಯ್ಯ ಅವರನ್ನು ಸನ್ಮಾನಿಸಲಾಯಿತು.
ಮಲೆನಾಡು ಸೊಸೈಟಿಯ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ನಿವೃತ್ತ ಪ್ರಾಚಾರ್ಯ ಬೀರಣ್ಣ ನಾಯಕ ಮೊಗಟಾ, ಗೌತಮ ಜುವೇರ್ಸನ ಪ್ರಕಾಶ ಶೇಟ್, ಶಿಕ್ಷಕ ಸುಧಾಕರ ನಾಯಕ, ಗಣೇಶ ಪತ್ತಾರ್ ಇದ್ದರು.
ಸುಜ್ಞಾನ ಸೇವಾ ಪೌಂಡೇಶನ್ ಅಧ್ಯಕ್ಷ ಜಿ.ಎನ್.ಭಟ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಜ್ಯೋತಿರಾದಿತ್ಯ ಭಟ್ ಸ್ವಾಗತಿಸಿದರು. ಗಾಯತ್ರಿ ಬೋಳಗುಡ್ಡೆ ಪ್ರಾರ್ಥಿಸಿದರು. ಶ್ರೀಧರ ವೈದಿಕರಮನೆ ನಿರ್ವಹಿಸಿದರು.
Prathidvani Yellapura