Breaking News

ಯಲ್ಲಾಪುರದಲ್ಲಿ ರಾಷ್ಟ್ರ ಧ್ವಜಕ್ಕೆ ಅಪಮಾನ ಸುಮೋಟೊ ಪ್ರಕರಣ ದಾಖಲು.!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿ ಸೆ,28 ರ ಗುರುವಾರದಂದು ಮುಸ್ಲಿಂ ಸಮೂದಾಯದ ಈದ್-ಮಿಲಾದ್ ಆಚರಣೆ ಸಂದರ್ಭದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಿ ಸಂಭ್ರಮಿಸದ್ದರು. ಈ ನಡುವೆ ಮೆರವಣಿಗೆಯಲ್ಲಿ ಭಾರತದ ರಾಷ್ಟ್ರ ಧ್ವಜದ ಮಾದರಿಯಲ್ಲಿ ಮದ್ಯದ ಬಿಳಿ ಬಣ್ಣದ ಭಾಗದಲ್ಲಿ ಮುಸ್ಲಿಂ ಸಮೂದಾಯದ ಗುರುತನ್ನಿಟ್ಟು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ.
ಈ ಸಂಬಂದ ಯಲ್ಲಾಪುರ ಠಾಣೆಯಲ್ಲಿ ಸ್ವಯಂ ದೂರು ದಾಖಲಾಗಿದ್ದು ತನಿಖೆ ಮುಂದುವರೆದಿರುವುದಾಗಿ ತಿಳಿದು ಬಂದಿದೆ.
ಒಂದೆಡೆ ಗಣಪತಿ ಹಬ್ಬದ ಸಡಗರ ಮತ್ತೊಂದು ಕಡೆ ಮುಸ್ಲಿಂ ಸಮುದಾಯದ ಈದ್ ಆಚರಣೆ ನಡುವೆ ರಾಷ್ಟ್ರ ಧ್ಜಜಕ್ಕೆ ಅಪಮಾನ ಪ್ರಕರಣ ನಡೆದಿದ್ದು ದುರದೃಷ್ಟಕರ
ಒಂದು ಮೂಲದ ಪ್ರಕಾರ ರಾಷ್ಟ್ರ ಧ್ವಜವನ್ನು ವಶಕ್ಕೆ ಪಡೆದಿದ್ದು ಅದರಲ್ಲಿ ಬಿಳಿ ಬಣ್ಣದ ಭಾಗದಲ್ಲಿ ಅರ್ಧ ಚಂದ್ರಾಕೃತಿಯನ್ನು ಅಳವಡಿಸಿರುವುದಾಗಿ ತಿಳಿದು ಬಂದಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *