Breaking News

ಯಲ್ಲಾಪುರ ಲಯನ್ಸ್ ಕ್ಲಬ್ ನಿಂದ ಸಾರ್ಥಕ ಸೇವೆ ಉಚಿತ ಕಣ್ಣಿನ ಪೊರೆ ತಪಾಸಣೆ ಶಿಭಿರ ಯಶಸ್ವಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ – ಯಲ್ಲಾಪುರ ಲಯನ್ಸ್ ಕ್ಲಬ್ ಹಾಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣ ಸಂಸ್ಥೆ ಕಾರವಾರ ಸಂಯುಕ್ತಾಶ್ರಯದಲ್ಲಿ  29-2-24 ರಂದು ಯಲ್ಲಾಪುರದ ಅಡಿಕೆ ಭವನದಲ್ಲಿ “ಕಣ್ಣಿನಪೊರೆ ಉಚಿತ ತಪಾಸಣಾ ಶಿಭಿರ ಮತ್ತು ಉಚಿತ ಶಸ್ತ್ರ ಚಿಕಿತ್ಸಾ ಶಿಭಿರ ” ಯಶಸ್ವಿಯಾಗಿ ನೆರವೇರಿತು.

ಕುಮುಟದ ಲಯನ್ಸ್ ರೇವಣಕರ ಚಾರಿಟಬಲ್ ಕಣ್ಣಿನ ಆಸ್ಪತ್ರೆ ನೇತ್ರ ತಜ್ಞ ವೈಧ್ಯರುಗಳಾದ ಡಾ|| ಮನೋಜ ಎಂ.ಎನ್ ಮತ್ತು ಡಾ|| ರಾಜಶೇಖರ ಡಿ. ಶಿಭಿರದಲ್ಲಿ ಪಾಲ್ಗೊಂಡು ಕಣ್ಣಿನ ಪೊರೆ ತಪಾಸಣೆ ಮಾಡಿದರು.

  ಈ ಸಂದರ್ಭದಲ್ಲಿ ಯಲ್ಲಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಸುರೇಶ್ ಬೋರ್ಕರ್, ಕೋಶಾಧ್ಯಕ್ಷ ಶೇಷಗಿರಿ ಪ್ರಭು ಪ್ರಮುಖರಾದ ಎಸ್.ಎಲ್.ಭಟ್ , ನೇತ್ರೇಕರ್, ಸುನಂದ ಬೋರ್ಕರ್, ಇನ್ನಿತರ ಪದಾದಿಕಾರಿಗಳು ಸದಸ್ಯರು ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *