Breaking News

ತನ್ನ ಪ್ರಾಣ ಕೊಟ್ಟು ಅಣ್ಣನ ಪ್ರಾಣ ರಕ್ಷಿಸಿದ ತಮ್ಮನ ಕರುಣಾಜನಕ ಸಾವು

ಸಾಂದರ್ಭಿಕ ಚಿತ್ರ ಗೂಗಲ್ ಕೃಪೆ


ಪ್ರತಿಧ್ವನಿ ಯಲ್ಲಾಪುರ : ಬಾವಿ ಸ್ವಚ್ಛಗೊಳಿಸಲು ಬಾವಿಗಿಳಿದ ಅಣ್ಣ ಅಸ್ವಸ್ಥನಾಗಿದ್ದನ್ನು ಕಂಡು ಬಾವಿಗಿಳಿದ ತಮ್ಮ ಅಣ್ಣನನ್ನು ಮೇಲಕ್ಕೆ ಕಳುಹಿಸಿ ತಾನು ಉಸಿರುಗಟ್ಟಿ ಪ್ರಾಣಬಿಟ್ಟ ದಾರುಣ ಘಟನೆ ಮಂಗಳವಾರ ತಾಲೂಕಿನ ಗೇರಾಳ ಗ್ರಾಮದಲ್ಲಿ ನಡೆದಿದೆ.


ರವಿ ಲಕ್ಷ್ಮಣ ಅಂಕೋಲೇಕರ(42) ಎಂಬಾತನೇ ಮೃತಪಟ್ಟ ವ್ಯಕ್ತಿಯಾಗಿದ್ದು ತನ್ನ ಅಣ್ಣ ಮತ್ತು ಅತ್ತಿಗೆಯೊಂದಿಗೆ ಮನೆ ಎದುರಿನ ಬಾವಿಯನ್ನು ಸ್ವಚ್ಛಗೊಳಿಸುವಾಗ ಘಟನೆ ನಡೆದಿದೆ. ಅಣ್ಣ ಕುಮಾರ ಎಂಬಾತನು ಹಗ್ಗಕಟ್ಟಿಕೊಂಡು ಬಾವಿಗಿಳಿದವನು ಸ್ವಚ್ಛಗೊಳಿಸುತ್ತಿರುವಾಗ ಉಸಿರುಗಟ್ಟಿ ಅಸ್ವಸ್ಥನಾಗಿದ್ದನ್ನು ಕಂಡ ತಮ್ಮ ರವಿ ತಕ್ಷಣ ಬಾವಿಗಿಳಿದು ಅಣ್ಣನ ಸೊಂಟಕ್ಕೆ ಹಗ್ಗ ಕಟ್ಟಿ ಮೇಲಕ್ಕೆ ಕಳುಹಿಸಿದನು. ನಂತರ ಬಾವಿಯೊಳಗೆ ಉಸಿರಾಟದ ತೊಂದರೆಗೆ ಸಿಲುಕಿದವನು ನೀರಿನಲ್ಲಿ ಬಿದ್ದು ಉಸಿರುಗಟ್ಟಿ ಮೃತಪಟ್ಟಿರುತ್ತಾನೆ.


ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *