
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿ ಕಾಯಕವೇ ಕೈಲಾಸವೆಂಬ ನಿಜ ಶರಣರ ತತ್ವವನ್ನು ಜಗತ್ತಿಗೆ ಪಸರಿಸಿದ ಜಗಜ್ಜ್ಯೋತಿ ಬಸವೇಶ್ವರರ ಆದರ್ಶಗಳು ಪ್ರಸ್ತುತ ಸಮಾಜಕ್ಕೆ ದಾರಿದೀಪವಾಗಿದೆ. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವು ನಡೆಯುವುದಲ್ಲದೇ ಭವಿಷ್ಯದ ಪೀಳಿಗೆಯಲ್ಲೂ ಮಹಾನ್ ಚೇತನರ ಜಾಗೃತಿ ತುಂಬಬೇಕಿದೆ ಎಂದು ತಹಸೀಲ್ದಾರ ಯಲ್ಲಪ್ಪ ಗೋಣೆಣ್ಣವರ ಹೇಳಿದರು.

ಅವರು ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡಿದ್ದ ಬಸವೇಶ್ವರ ಜಯಂತಿ ಆಚರಣೆಯಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಲಿಂಗಾಯತ ವೀರಶೈವ ಸಮುದಾಯದ ಸಾರ್ವಜನಿಕರು ಉಪಸ್ಥಿತರಿದ್ದರು.

ತಾಲೂಕಿನ ಕಿರವತ್ತಿಯಲ್ಲಿ ಜಯಕರ್ನಾಟಕ ಸಂಘಟನೆಯ ಅಡಿಯಲ್ಲಿ ತಾಲೂಕಾ ಅಧ್ಯಕ್ಷ ವಿಲ್ಸನ್ ಫರ್ನಾಂಡಿಸ್ ನೇತೃತ್ವದಲ್ಲಿ ಬಸವ ಜಯಂತಿಯನ್ನು ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.

ಈ ಶುಭ ಸಂದರ್ಭದಲ್ಲಿ ಜಯಕರ್ನಾಟಕ ಸಂಘಟನೆ ವತಿಯಿಂದಾ ಅನ್ನ ಸಂತರ್ಪಣೆಯನ್ನು ನೆರವೇರಿಸಲಾಯಿತು.





Prathidvani Yellapura