Breaking News

ಯಲ್ಲಾಪುರ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದ ನ್ಯಾಯಾಲಯ.


ಪ್ರತಿಧ್ವನಿ ಯಲ್ಲಾಪುರ : ಈ ಹಿಂದೆ ಯಲ್ಲಾಪುರ ತಾಲೂಕಿನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ದೌರ್ಜನ್ಯ ಪ್ರಕರಣದ ಅಪರಾಧಿಗೆ ಘನ ನ್ಯಾಯಾಲಯವು ಜುಲೈ,1 ರಂದು ತೀರ್ಪು ನೀಡಿದ್ದು ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.


ತಾಲೂಕಿನ ಉಮ್ಮಚ್ಚಗಿ ಸೂರಬೈಲ್ ನಿವಾಸಿ ಸಂತೋಷ ಪೇದ್ರು ಸಿದ್ದಿ ಮಂಡವಾಳಕರ (27) ಎಂಬಾತನೆ ಶಿಕ್ಷೆಗೊಳಗಾದ ವ್ಯಕ್ತಿಯಾಗಿದ್ದಾನೆ. ಅಪರಾಧ ನಡೆದ ಸಂದರ್ಭದಲ್ಲಿ ಯಲ್ಲಾಪುರ ಠಾಣೆಯ ಪಿ.ಐ ಆಗಿದ್ದ ಸುರೇಶ್ ಯಳ್ಳೂರು ತನಿಖಾಧಿಕಾರಿಯಾಗಿ ಆರೋಪಿಯನ್ನು ಹಿಡಿದು ನ್ಯಾಯಾಲಯಕ್ಕೆ ಒಪ್ಪಿಸಿ ಸಮಗ್ರ ಸಾಕ್ಷಾಧಾರಗಳನ್ನು ಸಂಗ್ರಹಿಸಿ ನೀಡುವುದರಲ್ಲಿ ಪ್ರಮುಖ ಪಾತ್ರವಹಿಸಿದ್ದು ಇಲ್ಲಿ ಸ್ಮರಿಸಬಹುದಾಗಿದೆ.


ಸಮಗ್ರ ಸಾಕ್ಷಾಧಾರಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ನ್ಯಾಯಾಲಯ ಸುದೀರ್ಘ ವಿಚಾರಣೆ ನಡೆಸಿದ್ದು ಜುಲೈ1ರ ಬುಧವಾರ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಸಜೆ,ಒಂದು ಲಕ್ಷ ದಂಡ ವಿಧಿಸಿದೆ ಮತ್ತು ಸಂತ್ರಸ್ಥ ಬಾಲಕಿಗೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ಪರಿಹಾರವಾಗಿ 4 ಲಕ್ಷ ಹಣವನ್ನು ನೀಡುವಂತೆ ಆದೇಶಿಸಿದೆ.
ಈ ಪ್ರಕರಣದ ವಿಚಾರಣೆಯನ್ನು ಮಾನ್ಯ ತ್ವರಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರತಿಭಾ ಬಂಡುರಾವ್ ಕುಲಕರ್ಣಿ ತೀರ್ಪು ನೀಡಿದವರಾಗಿದ್ದಾರೆ.
ಈ ಪ್ರಕರಣದ ತನಿಖೆಯನ್ನುಪಿಐ ಸುರೇಶ್ ಯಳ್ಳೂರ್ ನಡೆಸಿದ್ದು ತನಿಖಾ ಸಹಕಾರಿಯಾಗಿ ಎ.ಎಸ್.ಐ ಮಂಜುನಾಥ ಮನ್ನಂಗಿ, ಕೋಟ್೯ ಮಾನಿಟರಿಂಗನ್ನು ಪಿಎಸ್ಐ ರಾಜಶೇಖರ ವಂದಲಿ ನಿರ್ವಹಿಸಿದ್ದು ಸಿಬ್ಬಂದಿಗಳಾದ ಗಜಾನನ ನಾಯ್ಕ್ ಎಎಸ್ಐ, ವೀರೇಶ್ ಎಂ.ಹೆಚ್ ರವರು ಸಾಕ್ಷಗಳನ್ನು ಕಾಲಕಾಲಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಶ್ರಮಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

“ಧರ್ಮಸ್ಥಳ ಸಂಘದ ವತಿಯಿಂದ ಇಡಗುಂದಿ ವಿಶ್ವ ದರ್ಶನ ಸಂಸ್ಥೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ.

ಪ್ರತಿಧ್ವನಿ ಯಲ್ಲಾಪುರ: ತಾಲೂಕಿನ ಇಡುಂದಿ ವಿಶ್ವ ದರ್ಶನ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ,” ಶ್ರೀ …

Leave a Reply

Your email address will not be published. Required fields are marked *