

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಸರಕಾರಿ ಪಿ ಯು ಕಾಲೇಜಿನಲ್ಲಿ ಧರ್ಮಸ್ಥಳ ಜನಜಾಗೃತಿ ವೇದಿಕೆ ಅಡಿಯಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು.

ಧುಶ್ಚಟ ಮುಕ್ತ ಸಮಾಜದ ನಿರ್ಮಾಣದ ಕುರಿತು ರಂಗ ಸಹ್ಯಾದ್ರಿ ಸಂಸ್ಥಾಪಕ ಮತ್ತು ಸಂಪನ್ಮೂಲ ವ್ಯಕ್ತಯಾದ ಡಿ.ಎನ್.ಗಾಂವ್ಕರ್ ವ್ಯಸನ ಮುಕ್ತ ಸಮಾಜದ ಕುರಿತು ವಿದ್ಯಾರ್ಥಿಗಳಿಗೆ ಜಾಗೃತ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಿನ್ಸಿಪಾಲ್ ಎಸ್ ಟಿ ವೈದ್ಯ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ಸಂಯೋಜಕರಾದ ವೆಂಕಟೇಶ್, ವೀಣಾ ಶೆಟ್ಟಿ ಯವರು ನಿರ್ವಹಿಸಿದರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.







Prathidvani Yellapura