
ಪ್ರತಿಧ್ವನಿ ಯಲ್ಲಾಪುರ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕದ ವತಿಯಿಂದ ಪ್ರಧಾನ ಮಾಡಲಾಗುವ ಮಾಜಿ ಪ್ರಧಾನಿ ದು,ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಯಲ್ಲಾಪುರ ತಾಲೂಕಿನ ಕಂಚನಳ್ಳಿ ಸ.ಹಿ.ಪ್ರಾ ಶಾಲೆಯ ಕ್ರಿಯಾಶೀಲ ಶಿಕ್ಷಕ ಸುಧಾಕರ್ ಜಿ ನಾಯ್ಕ್ ಆಯ್ಕೆಯಾಗಿದ್ದು ಸೆ,5 ರಂದು ಬೆಂಗಳೂರಿನ ಕ್ವಿನ್ಸ್ ರಸ್ತೆಯಲ್ಲಿನ “ಭಾರತ್ ಜೋಡೋ ಭವನ” ದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕೆಪಿಸಿಸಿ ಶಿಕ್ಷಕ ಘಟಕದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ಆಧೇಶ ಹೊರಡಿಸಿದ್ದಾರೆ.

ಸುಧಾಕರ್ ನಾಯ್ಕ್ ಯಲ್ಲಾಪುರ ತಾಲೂಕಿನ ಶೈಕ್ಷಣಿಕ ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ಜನಜನಿತವಾದ ಹೆಸರಾಗಿದೆ. ಸದಾ ಕ್ರಿಯಾಶೀಲತೆಯಿಂದ ಕೂಡಿದ ವ್ಯಕ್ತಿತ್ವ, ಸೇವಾ ಮನೋಭಾವ ಸಾಧನೆಯ ತುಡಿತ ಹೊಂದಿದ ಶಿಕ್ಷಕ.
ಈಗಾಗಲೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿರುವ ಸುಧಾಕರ ನಾಯ್ಕ್ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದು ತಾಲೂಕು ಕಾನೂನು ಸೇವಾ ಸಮಿತಿಯ ಲೀಗಲ್ ವಾಲಂಟಿಯರ್ ಆಗಿ ಮುಂದುವರೆದಿದ್ದಾರೆ.
ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಅವರಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಹಲವಾರು ಸಂಸ್ಥೆಗಳೊಂದಿಗೆ ಉತ್ತಮ ಭಾಂದವ್ಯ ಇರಿಸಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಸದಾ ಶ್ರಮಿಸುತ್ತಾರೆ.
ಒರ್ವ ಸರ್ಕಾರಿ ನೌಕರನೆಂಬ ಹಮ್ಮುಬಿಮ್ಮು ಇಲ್ಲದೆ ಸದಾ ಜನರೊಂದಿಗೆ ಬೆರೆತು ಸಮಾಜ ಸೇವಾ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುವ ಜನಸ್ನೇಹಿ ಶಿಕ್ಷಕ ರಾಗಿ ಗುರುತಿಸಿಕೊಂಡಿದ್ದಾರೆ.
ಸದ್ಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಸುಧಾಕರ ನಾಯ್ಕ್ ಅವರನ್ನು ಆಯ್ಕೆ ಮಾಡಿರುವುದು ಯಲ್ಲಾಪುರ ತಾಲೂಕಿನ ಶಿಕ್ಷಕ ವರ್ಗಕ್ಕೆ ಮತ್ತು ಊರ ನಾಗರಿಕರಿಗೆ ಗೌರವ ತಂದ ವಿಷಯವಾಗಿದೆ.
ಪ್ರಶಸ್ತಿಗೆ ಆಯ್ಕೆಯಾದ ಸುಧಾಕರ ನಾಯ್ಕ್ ಅವರಿಗೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಶಾಂತಾರಾಮ್ ಸಿದ್ದಿ, ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ್ ಮಿರಾಶಿ, ಸಂಕಲ್ಪ ಸೇವಾ ಸಂಸ್ಥೆ ಪ್ರಮೋದ್ ಹೆಗಡೆ, ಸಾಮಾಜಿಕ ಕಾರ್ಯಕರ್ತ ಬಾಲಕೃಷ್ಣ ನಾಯಕ್, ವರ್ತಕ ನಂದನ ಬಾಳಗಿ, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕ ವರ್ಗ ಇತರೆ ಸಂಘ ಸಂಸ್ಥೆಗಳು, ಹಲವು ಪ್ರಮುಖರು ಶುಭ ಕೋರಿದ್ದಾರೆ.









Prathidvani Yellapura