Breaking News

ಸರ್ಕಾರಿ, ಅರಣ್ಯ ಭೂಮಿಯಲ್ಲಿನ ಆಸ್ತಿಗಳ ತೆರಿಗೆ ವಿಚಾರ: ಇಬ್ಬರೂ ಒಟ್ಟಾಗಿ ಜನತೆಗೆ ನ್ಯಾಯ ಒದಗಿಸುವ ಕೆಲಸ ಮಾಡೋಣ” ಸಂಸದ ಕಾಗೇರಿಗೆ ಶಾಸಕ ಶಿವರಾಮ ಹೆಬ್ಬಾರ್ ಬಹಿರಂಗ ಆಹ್ವಾನ!!

ಪ್ರತಿಧ್ವನಿ ಯಲ್ಲಾಪುರ : ಸರ್ಕಾರಿ ಹಾಗೂ ಅರಣ್ಯ ಭೂಮಿಯಲ್ಲಿರುವ ಆಸ್ತಿಗಳಿಗೆ ತೆರಿಗೆ ನಿರಾಕರಣೆ ಮತ್ತು ಇ-ಸ್ವತ್ತು 2.0 ತಂತ್ರಾಂಶದಿಂದ ಆಸ್ತಿಗಳನ್ನು ಕೈಬಿಡುವ ಕುರಿತು ಕಳೆದ ಆಗಸ್ಟ್ 13ರಂದು ಹೊರಡಿಸಲಾಗಿದ್ದ ಸುತ್ತೋಲೆಗೆ ತಡೆ ನೀಡಿರುವುದನ್ನು ‘ಕೇವಲ ಕಣ್ಣೊರೆಸುವ ತಂತ್ರ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನೀಡಿರುವ ಹೇಳಿಕೆಯನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಶಾಸಕ ಶಿವರಾಮ ಹೆಬ್ಬಾರ್ ಅವರು, “ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರು, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಈ ಆದೇಶದಿಂದ ಜನತೆಗೆ ಉಂಟಾಗುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕಾನೂನು ರೂಪಿಸುವ ನಿರ್ಧಾರ ಕೈಗೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ

ಮನೆಯ ಹಕ್ಕಿನ ಬಗ್ಗೆ ಮಾತನಾಡುವ ಸಂಸದ ಕಾಗೇರಿ ಅವರು ಬಡ ಮತದಾರರ ಹಕ್ಕುಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂಬುದನ್ನು ಪ್ರಶ್ನಿಸಬೇಕಾಗಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಜನತೆಗೆ ತೊಂದರೆ ಉಂಟುಮಾಡುತ್ತಿರುವ ತೆರಿಗೆ ಸಂಗ್ರಹದ ಆದೇಶಕ್ಕೆ ಸೂಕ್ತ ಕಾನೂನು ರೂಪಿಸುವ ಮೂಲಕ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಸಂಸದ ಕಾಗೇರಿ ಅವರು ಬಡವರ ಬಗ್ಗೆ ಬದ್ದತೆಯನ್ನು ಲೋಕಸಭೆಯಲ್ಲಿ ಪ್ರದರ್ಶಿಸಲಿ

“ಕಾಗೇರಿ ಅವರು ತಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಲೋಕಸಭೆಯ ಅಧಿವೇಶನದಲ್ಲಿ ಪ್ರದರ್ಶಿಸಲಿ. ಅತಿಕ್ರಮಣದಾರರಿಗೆ ಭೂಮಿ ಮಂಜೂರು ಮಾಡಲು ಸಂಬಂಧಿಸಿದಂತೆ ಮೂರು ತಲೆಮಾರುಗಳ ಆಸ್ತಿ ವಾರಸುದಾರಿಕೆಯ ಮಾನದಂಡವನ್ನು ಒಂದು ತಲೆಮಾರಿಗೆ ಇಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಟ್ಟದಲ್ಲಿ ಕಾನೂನು ತಿದ್ದುಪಡಿಗೆ ಪ್ರಯತ್ನಿಸಲಿ. ಆಗ ಮಾತ್ರ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ ಎಂದು ನಂಬಲು ಸಾಧ್ಯ” ಎಂದು ಹೆಬ್ಬಾರ್ ಅಭಿಪ್ರಾಯಪಟ್ಟಿದ್ದಾರೆ.

ಕಾಗೇರಿ ಕಣ್ಣೊರೆಸುವ ತಂತ್ರ ಬಿಟ್ಟು ಅರಣ್ಯ ವಾಸಿಗಳ ಪರ ಧ್ವನಿ ಎತ್ತಿ ಶಾಶ್ವತ ಪರಿಹಾರ ನೀಡಲಿ

“ಪ್ರತಿನಿತ್ಯ ಜನರ ಕಣ್ಣೊರೆಸುವ ತಂತ್ರ ಅನುಸರಿಸುತ್ತಿರುವ ಆರೋಪ ಮಾಡುವ ಕಾಗೇರಿ ಅವರು, ನಮ್ಮ ಪ್ರಯತ್ನವನ್ನೂ ಕಣ್ಣೊರೆಸುವ ತಂತ್ರ ಎಂದು ಟೀಕಿಸುತ್ತಿರುವುದು ವಿಪರ್ಯಾಸ. ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಅತಿಕ್ರಮಣ ಮಾಡಿ ವಾಸಿಸುತ್ತಿರುವ ಜನರಿಗೆ ಯಾವುದೇ ತೊಂದರೆಯಾಗದಂತೆ, ಅವರ ಹಿತಾಸಕ್ತಿಯನ್ನು ಕಾಪಾಡುವ ರೀತಿಯಲ್ಲಿ ಕಾನೂನು ತಿದ್ದುಪಡಿ ತಂದು ಶಾಶ್ವತ ಪರಿಹಾರ ಕಲ್ಪಿಸುವುದು ನಮ್ಮ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.

ಶಾಸಕನಾಗಿ ನನಗು ಮತ್ತು ರಾಜ್ಯ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇದ್ದು ಸಮಸ್ಯೆ ಬಗೆಹರಿಸಲಿದ್ದೇವೆ

ಕಾಂಗ್ರೇಸ ಪಕ್ಷದ ಮುಖಂಡರು ಹಾಗೂ ಹೋರಾಟಗಾರರಾದ ರವೀಂದ್ರ ನಾಯ್ಕ ಅವರು ಕೂಡ ಈ ಆದೇಶಕ್ಕೆ ತಾತ್ಕಾಲಿಕ ತಡೆ ನೀಡುವುದಷ್ಟೇ ಸಾಕಾಗುವುದಿಲ್ಲ; ಬದಲಾಗಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ವಿಚಾರವನ್ನು ಶಾಸಕನಾಗಿ ನಾನು ಹಾಗೂ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದೇವೆ. ಜನರಿಗೆ ತೊಂದರೆಯಾಗದಂತೆ ಅಗತ್ಯ ಕಾನೂನು ರೂಪಿಸಿ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಬಡವರ ಧ್ವನಿಯಾಗಿ ಸಂಸತ್ತಿನಲ್ಲಿ ಸಂಸದರು ಧ್ವನಿಎತ್ತಲಿ

ಹೋರಾಟಗಾರರಾದ ರವೀಂದ್ರ ನಾಯ್ಕ ಅವರು ಸಂಸದರಾದ ಕಾಗೇರಿ ಅವರಿಗೆ ಬಡ ಮತದಾರರ ಮತದ ಹಕ್ಕನ್ನು ಕಾಪಾಡುವ ನಿಟ್ಟಿನಲ್ಲಿ ಹೋರಾಟ ಮಾಡಲು ಹಾಗೂ ಅತಿಕ್ರಮಣ ಭೂಮಿ ಮಂಜೂರಾತಿಗೆ ಇರುವ ಕಾನೂನು ತೊಡಕುಗಳನ್ನು ನಿವಾರಣೆಗಾಗ ಲೋಕಸಭೆಯಲ್ಲಿ ಕಾನೂನು ತಿದ್ದುಪಡಿಗಾಗಿ ಧ್ವನಿ ಎತ್ತುವಂತೆ ಹೇಳಿ.

ಇಬ್ಬರೂ ಒಟ್ಟಾಗಿ ಕೆಲಸ ಮಾಡೋಣ ಜನತೆಗೆ ನ್ಯಾಯಕೊಡಿಸುವ  ಶಾಸಕ ಹೆಬ್ಬಾರ್ ರಾಜಕಾರಣದ ಗಂಡೆದೆಯ ಮಾತು

ಕೇಂದ್ರ ಸರ್ಕಾರದ ಮಟ್ಟದಲ್ಲಿ ಅವರು ಪ್ರಯತ್ನಿಸಲಿ; ರಾಜ್ಯ ಸರ್ಕಾರದ ಮಟ್ಟದಲ್ಲಿ ನಾವು ನಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತೇವೆ. ಇಬ್ಬರೂ ಒಟ್ಟಾಗಿ ಜನತೆಗೆ ನ್ಯಾಯ ಒದಗಿಸುವ ಕೆಲಸ ಮಾಡೋಣ” ಎಂದು ಶಾಸಕ ಶಿವರಾಮ ಹೆಬ್ಬಾರ್ ಅವರು ತಿಳಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *