
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಜನಾಕ್ರೋಶ ಪಾದಯಾತ್ರೆ ಕೈಗೊಂಡಿದ್ದು ನಾಳೆ ಯಲ್ಲಾಪುರಕ್ಕೆ ಬಿ.ವೈ.ವಿಜಯೇಂದ್ರ ಸೇರಿದಂತೆ ಘಟಾನುಘಟಿ ನಾಯಕರೆಲ್ಲಾ ಆಗಮಿಸುತ್ತಿದ್ದು ಉತ್ತರ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ಥಳೀಯ ಯಲ್ಲಾಪುರ ಬಿಜೆಪಿ ಮಂಡಲದ ಸಹಕಾರದಲ್ಲಿ ಯಲ್ಲಾಪುರದ ವೈಟಿಎಸ್ಎಸ್ ಮೈದಾನದಲ್ಲಿ ಜನಾಕ್ರೋಶ ಪಾದಯಾತ್ರೆಯ ಸಭಾ ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗಿದೆ.

ಜಿಲ್ಲಾಧ್ಯಕ್ಷ ಎನ್.ಎಸ್ ಹೆಗಡೆ, ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಎರಡು ದಿನಗಳಿಂದ ಯಲ್ಲಾಪುರದಲ್ಲೆ ಬೀಡು ಬಿಟ್ಟಿದ್ದು ಯಾತ್ರೆಯ ಸಂಪೂರ್ಣ ತಯಾರಿಯಲ್ಲಿ ನಿರತರಾಗಿದ್ದಾರೆ.



ಮಂಡಲಾಧ್ಯಕ್ಷ ಪ್ರಸಾದ್ ಹೆಗಡೆ ಪದಾಧಿಕಾರಿಗಳು ಕಾರ್ಯಕರ್ತರು ಮಹಿಳಾ ಕಾರ್ಯಕರ್ತರು ಹಗಲಿರುಳು ಶ್ರಮಿಸುತ್ತ ಯಲ್ಲಾಪುರವನ್ನು ಕಮಲ ಧ್ವಜಗಳಿಂದ ದೊಡ್ಡ ದೊಡ್ಡ ಫ್ಲೆಕ್ಸ್ ಗಳಿಂದ ಸಿಂಗರಿಸುತ್ತಿದ್ದಾರೆ.

ಗುರುವಾರ ಸಂಜೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಕಾರವಾರ-ಅಂಕೋಲ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ನಾಯ್ಕ ಯಾತ್ರೆಯ ಸಿದ್ದತೆ ವಿಕ್ಷಣೆ ಮಾಡಿದ್ದು ಜಿಲ್ಲೆಯ ವಿವಿಧ ತಾಲೂಕುಗಳ ಪಕ್ಷದ ಪ್ರಮುಖರು ಕಾರ್ಯಕರ್ತರು ಸ್ಥಳೀಯ ಕಾರ್ಯಕರ್ತರು ಹಿರಿಯರು ಸಿದ್ದತೆ ಯಲ್ಲಿ ಕೈ ಜೋಡಿಸಿದ್ದಾರೆ.

ಬಹುತೇಕ 3500 ಸಾವಿರ ಜನರು ಸೇರುವ ನಿರೀಕ್ಷೆ ಇದ್ದು ಆಸನದ ವ್ಯವಸ್ಥೆ ಮಾಡಲಾಗಿದೆ.ಬದಂತಹ ಕಾರ್ಯಕರ್ತರಿಗೆ ಲಘು ಉಪಾಹಾರ,ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮಂಡಲಾಧ್ಯಕ್ಷ ಪ್ರಸಾದ್ ಹೆಗಡೆ ಮಾಹಿತಿ ನೀಡಿದ್ದಾರೆ.





Prathidvani Yellapura