Breaking News

ಯಲ್ಲಾಪುರದಲ್ಲಿ ಗಾಂಜಾ ಘಮಲು 50 ಸಾವಿರ ಮೌಲ್ಯದ ಗಾಂಜದೊಂದಿಗೆ ಆರೋಪಿ ಸೆರೆ.

ಕೇಬಲ್ ನಾಗೇಶ್, ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ: ತಾಲ್ಲೂಕಿನ ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿ ದೊಡ್ಡ ಯಲವಳ್ಳಿ ಕ್ರಾಸ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದು 860 ಗ್ರಾಂ ತೂಕ 50 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.

ದೊಡ್ಡ ಯಲವಳ್ಳಿ ನಿವಾಸಿ 64 ವರ್ಷ ವಯೋಮಾನದ ಬೈಯ್ಯ ವಾಗು ಕೊಕರೆ ಎಂಬಾತನೆ ಗಾಂಜಾ ಮಾರುತ್ತಿದ್ದ ವ್ಯಕ್ತಿಯಾಗಿದ್ದು ಖಚಿತ ಮಾಹಿತಿಯನ್ನಾಧರಿಸಿ ದಾಳಿ ಮಾಡಿದ ಯಲ್ಲಾಪುರ ಪೊಲೀಸ್ ತಂಡ ಆರೋಪಿಯನ್ನು ಮಾಲಿನ ಸಹಿತ ಹಿಡಿದು ಕಾನೂನು ಕ್ರಮಕ್ಕೆ ಒಳಪಡಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ದೀಪನ್ ಎನ್ ,ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ ಕೃಷ್ಣಮೂರ್ತಿ ಹಾಗು ಪೊಲೀಸ್ ಉಪಾಧೀಕ್ಷೆ ಗೀತಾ ಪಾಟೀಲ ಮಾರ್ಗದರ್ಶನದಲ್ಲಿ, ಪಿ.ಐ. ರಮೇಶ್ ಹಾನಾಪುರ ನೇತೃತ್ವದಲ್ಲಿ ಪಿಎಸ್ಐಗಳಾದ‌ ರಾಜಶೇಖರ ವಂದಲಿ, ಸಿದ್ದಪ್ಪ ಗುಡಿ, ಮಹಾವೀರ ಕಾಂಬ್ಳೆ, ಶೇಡಜಿ ಚವ್ಹಾಣ್ ಹಾಗು ಸಿಬ್ಬಂದಿಗಳಾದ ಪ್ರೊಭೆಷನರಿ ಪಿ.ಎಸ್.ಐ ಶರಣಬಸವ, ಎ.ಎಸ್.ಐ ದೀಪಕ್ ಸೋಮವಂಶಿ, ಸಿ.ಹೆಚ್.ಸಿ ಉಮೇಶ ತುಂಬರಗಿ, ಸಿಪಿಸಿ ಸಂತೋಷ ಬಾಳೇರ, ಸುರೇಶ ಕಂಟ್ರಾಕ್ಟರ್, ಡಿ.ಕೆ.ಬಸವರಾಜ ಕೆ.ಹೆಚ್.ಮಾರುತಿ, ಆರೋಪಿ ಬಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಎಲ್ಲರನ್ನು ಉತ್ತರ ಕನ್ನಡ ಪೊಲೀಸ್ ಅಧೀಕ್ಷಕರು ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ …

Leave a Reply

Your email address will not be published. Required fields are marked *