Breaking News

ಸ್ವರ್ಣ ಗೋಲ್ಡ್ ಮತ್ತು ಡೈಮಂಡ್ ಜುವೆಲ್ಲರಿ ಪ್ರದರ್ಶನ ಹಾಗು ಮಾರಾಟ ಮೇಳ ಉದ್ಘಾಟಿಸಿದ ಬಾಲಕೃಷ್ಣ ನಾಯಕ್.


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ವೆಂಕಟರಮಣ ಸಭಾಭವನದಲ್ಲಿ ಸ್ವರ್ಣ ಸಂಸ್ಥೆಯವರು ಹಮ್ಮಿಕೊಂಡ ಬಂಗಾರದ ಆಭರಣಗಳು ಮತ್ತು ವಜ್ರದ ಆಭರಣಗಳ ಪ್ರದರ್ಶನ ಹಾಗು ಮಾರಾಟ ಮೇಳವನ್ನು ಯುವ ಉದ್ಯಮಿ ಬಾಲಕೃಷ್ಣ ನಾಯಕ್ ಉದ್ಘಾಟಿಸಿ ಶುಭಕೋರಿದರು.


11 ರ ರವಿವಾರದಿಂದ 14 ರ ಬುಧವಾರದ ವರೆಗೆ ಉತ್ತಮ ಗುಣಮಟ್ಟದ ಮತ್ತು ನವೀನ ಶೈಲಿಯ ಬಂಗಾರದ ಆಭರಣಗಳು ಮತ್ತು ಡೈಮಂಡ್‌ ಆಭರಣಗಳ ಪ್ರದರ್ಶನ ಹಾಗು ಮಾರಾಟ ನಡೆಯಲಿದ್ದು ಯಲ್ಲಾಪುರ ತಾಲೂಕಿನ ಸುತ್ತಮುತ್ತಲಿನ ಆಭರಣ ಪ್ರಿಯರು ಭೇಟಿ ನೀಡಬಹುದಾಗಿದೆ ಎಂದು ಸಂಘಟಕರು ಕೋರಿದ್ದಾರೆ.


ಈ ಸಂದರ್ಭದಲ್ಲಿ ಮೇಳದ ಮಾಲಿಕ ಹಾಗು ಆಯೋಜಕ ಅವಿನಾಶ್ ಗೋಪಾಲಕೃಷ್ಣ ನಾಯಕ್ ಗುಜ್ಜಾಡಿ, ರಾಮ ಸ್ಟೋಸ್೯ ಮಾಲಿಕ ಮಾರುತಿ ನಾಯಕ,ವಿಭಾ ನಾಯಕ್ ಹುಬ್ಬಳ್ಳಿ ಹಾಗು ದೇವಸ್ಥಾನದ ಅರ್ಚಕ ಪ್ರಮೋದ್ ಭಟ್ ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಜನಸ್ನೇಹಿ,ಜನಾನುರಾಗಿ ಎಸಿಎಫ್ ಹಿಮವತಿ ಭಟ್ ಪದೋನ್ನತಿಯೊಂದಿಗೆ ಗೌರವದ ವರ್ಗಾವಣೆ ಬೆಂಗಳೂರಿಗೆ.

ವಿಧಾನಪರಿಷತ್ ಮಾಜಿ ಸದಸ್ಯ “ಶಾಂತಾರಾಮ್ ಸಿದ್ದಿ” ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ : ಅರಣ್ಯ ಇಲಾಖೆಯ ಕೆನರಾ ವೃತ್ತದಲ್ಲಿ ಉತ್ತಮ ಕರ್ತವ್ಯ …

Leave a Reply

Your email address will not be published. Required fields are marked *