


ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ – ದಕ್ಷಿಣ ಭಾರತದ ರಾಷ್ಟ್ರಮಟ್ಟದ ಮಾಸ್ಟರ್ ಗೇಮ್ಸ್ ಕ್ರೀಡಾಕೂಟದಲ್ಲಿ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕ್ರೀಡಾಪಟು ಸಂತೋಷ ಮರಾಠಿ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಕಂಚು,ಬೆಳ್ಳಿ ಹಾಗು ಬಂಗಾರದ ಪದಕ ಗಳಿಸಿ ತಾಲೂಕಿಗೆ ಕೀರ್ತಿ ತಂದಿರುತ್ತಾರೆ.


ಮಾ, 09 ಮತ್ತು 10 2024 ರಂದು ಮಹಾತ್ಮ ಗಾಂಧಿ ಕ್ರೀಡಾಂಗಣ ಅಜ್ಜರಕಾಡು ಉಡಪಿ ಯಲ್ಲಿ ನಡೆದ 02ನೇ ದಕ್ಷಿಣ ಭಾರತದ ರಾಷ್ಟ್ರಮಟ್ಟದ ಮಾಸ್ಟರ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ 1 ಚಿನ್ನ, 2 ಬೆಳ್ಳಿ, 1 ಕಂಚಿನ ಪದಕ ಗಳಿಸುವುದರೊಂದಿಗೆ ಅಂತರರಾಷ್ಟ್ರೀಯ ಮಾಸ್ಟರ್ ಗೇಮ್ಸ್ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಹತೆ ಪಡೆದಿರುವುದು ಯಲ್ಲಾಪುರ ತಾಲೂಕಿನ ಕ್ರೀಡಾವಲಯಕ್ಕೆ ಸಂತಸದ ಸಂಗತಿಯಾಗಿದೆ.


🏅800 ಮೀಟರ್ ವೇಗದ ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ
🏅 4X400 ಮೀಟರ್ ರೀಲೆ ಓಟದ ಸ್ಪರ್ಧೆಯಲ್ಲಿ ಬಂಗಾರದ ಪದಕ
🏅1500 ಮೀಟರ್ ವೇಗದ ಓಟದ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಹಾಗೂ
🏅400 ಮೀಟರ ವೇಗದ ಓಟದ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಗಳಿಸಿ ಮುಂದೆ ನಡೆಯಲಿರುವ ಅಂತರಾಷ್ಟ್ರೀಯ ಮಾಸ್ಟರ್ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಇವರಿಗೆ ತರಬೇತಿಯನ್ನು ನೀಡಿದ ಜಿ.ಎಂ.ತಾಂಡುರಾಯನ್ ನಿವೃತ್ತ ದೈಹಿಕ ಶಿಕ್ಷಕರು ಹಾಗೂ ಅಶೋಕ ನಾಯ್ಕ ,ಮಹೇಶ್ ಆಲ್ಮತ್ ಅಭಿನಂದನೆ ಸಲ್ಲಿಸಿದ್ದಾರೆ



Prathidvani Yellapura