


ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಯಲ್ಲಾಪುರ : ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದು ಜಾಗ ಕೊಂಡು ಮನೆ ಕಟ್ಟಿಕೊಂಡು ವಾಸಿಸುತ್ತಿರುವವರ ಸಂಕಷ್ಟ ಇಂದು ದೂರಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಯಕತ್ವದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರರ ಮುಖಂಡತ್ವದಲ್ಲಿ ಬಿ ಹಾಗೂ ಇ-ಖಾತಾ ಪಟ್ಟ ನೀಡುವ ಕಾರ್ಯಕ್ಕೆ ಶ್ರಮಿಸಿದ ಫಲವೇ ಇಂದು ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡುವಂತಾಗಿದೆ. ಇಂತಹ ಜನೋಪಯೋಗಿ ಕಾರ್ಯಕ್ಕೆ ಕ್ಷೇತ್ರದ ಶಾಸಕನಾಗಿ ಅಭಿನಂದನೆ ಸಲ್ಲಿಸುತ್ತೇನೆ. ಸರ್ಕಾರ ಯಾವುದೇ ಇರಲಿ ಜನೋಪಯೋಗಿ ಕಾರ್ಯವನ್ನು ಅಭಿನಂದಿಸಬೇಕಿರುವುದು ಮಾನವೀಯ ಮೌಲ್ಯವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಪಟ್ಟಣ ಪಂಚಾಯತ ಆವರಣದಲ್ಲಿ ಮಾ. 10 ರಂದು ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಪಟ್ಟಣ ಪಂಚಾಯತ ಯಲ್ಲಾಪುರ ಇವರು ಹಮ್ಮಿಕೊಂಡ ಕರ್ನಾಟಕ ಸರ್ಕಾರದ ಹೆಮ್ಮೆಯ ಕಾರ್ಯಕ್ರಮ ಇ-ಖಾತಾ ಅಭಿಯಾನದಲ್ಲಿ ಸಾಂಕೇತಿಕವಾಗಿ 10 ಫಲಾನುಭವಿಗಳಿಗೆ ಅಧಿಕೃತ ಪಟ್ಟಾ ವಿತರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಫಲಾನುಭವಿಗಳ ಪರವಾಗಿ ಆರೋಗ್ಯ ಇಲಾಖೆಯ ನಿವೃತ್ತ ನೌಕರ ಎಸ್.ಟಿ ಭಟ್ಟ , ಸದಾನಂದ ಭಟ್ಟ ಮಲವಳ್ಳಿ ಮಾತನಾಡಿದರು.ಪ.ಪಂ ಅಧ್ಯಕ್ಷೆ ನರ್ಮದಾ ರವೀಂದ್ರ ನಾಯ್ಕ, ಉಪಾಧ್ಯಕ್ಷ ಅಮಿತ್ ಅಂಗಡಿ, ಸ್ಥಾಯಿ ಸಮಿತಿ ಅಧ್ಯಕ್ಷ ನೂತನನಗರ ಅಲಿ, ಮಾಜಿ ಅಧ್ಯಕ್ಷೆ ಸುನಂದಾ ದಾಸ್, ಮುಖ್ಯಾಧಿಕಾರಿ ಸುನಿಲ್ ಗಾವಡೆ ಇನ್ನಿತರರು ಉಪಸ್ಥಿತರಿದ್ದರು.

Prathidvani Yellapura