Breaking News

ಯಲ್ಲಾಪುರ ತಾಲೂಕಿನ ನೂತನ ದಂಢಾಧಿಕಾರಿಯಾಗಿ ಎಂ.ಆರ್.ಕುಲಕರ್ಣಿ ಅಧಿಕಾರ ಸ್ವೀಕಾರ.

ಪ್ರತಿಧ್ವನಿ ಯಲ್ಲಾಪುರ : ತಾಲೂಕು ದಂಢಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ ಹೊಸ್ಮನಿ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಸರ್ಕಾರದ ಆದೇಶದಂತೆ  ಎಂ ಆರ್ ಕುಲಕರ್ಣಿ ಯವರು ಯಲ್ಲಾಪುರ ತಾಲ್ಲೂಕಿನ ನೂತನ ದಂಢಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುತ್ತಾರೆ.

ಎಂ.ಆರ್.ಕುಲಕರ್ಣಿಯವರು ಮೂಲತಃ ದಾರವಾಡ ಜಿಲ್ಲೆಯವರಾಗಿದ್ದು ರಾಜ್ಯದ ವಿವಿಧ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗು ಸಿದ್ದಾಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದು ಇದೀಗ ಯಲ್ಲಾಪುರ ತಾಲೂಕಿನ ತಹಶಿಲ್ದಾರರಾಗಿ ಜವಾಬ್ದಾರಿ ತೆಗೆದುಕೊಂಡಿರುತ್ತಾರೆ. ನೂತನ ತಹಶಿಲ್ದಾರರಿಗೆ ಇಲಾಖೆಯ ಅಧಿಕಾರಿ ವರ್ಗ ಆತ್ಮೀಯತೆಯಿಂದ ಸ್ವಾಗತಿಸಿರುತ್ತಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪಟ್ಟಣ ಸಮೀಪದ ಅರಣ್ಯದಲ್ಲಿ ಶ್ರೀಗಂಧ ಚೋರರ ಕರಾಮತ್ತು ಗಂಧದ ಮರ ಕಡಿದ ಕಳ್ಳರು.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಸಮೀಪದಲ್ಲಿರುವ ನಾರಾಯಣಪುರ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಕಳ್ಳರು ತಮ್ಮ ಕೈಚಳಕ ತೋರಿದ್ದು ಗುಣಮಟ್ಟದ ಮತ್ತು …

Leave a Reply

Your email address will not be published. Required fields are marked *