Breaking News

ಕರ್ನಾಟಕ ರಾಜ್ಯ ಧನಗರಗೌಳಿ ಯುವ ಸೇನೆ ವತಿಯಿಂದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ.


ಪ್ರತಿಧ್ವನಿ ಯಲ್ಲಾಪುರ : ಕರ್ನಾಟಕ ರಾಜ್ಯ ಧನಗರಗೌಳಿ ಯುವ ಸೇನೆ (KARDGYS) ವತಿಯಿಂದ 2025-26 ನೇ ಸಾಲಿನಲ್ಲಿ ನಡೆದ SSLC ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 80 ಕ್ಕಿಂತ ಅಧಿಕ ಅಂಕಗಳಿಸಿದ ಧನಗರಗೌಳಿ ಸಮಾಜದ ಉತ್ತರ ಕನ್ನಡ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಸುಮಾರು 150 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಕಾರ್ಯಕ್ರಮವನ್ನು ಯಲ್ಲಾಪುರ ಪಟ್ಟಣದ ಶ್ರೀ ಲಕ್ಷ್ಮೀ ವೆಂಕಟರಮಣ ಮಠದಲ್ಲಿ ದಿನಾಂಕ 12-07-2026, ಬೆಳಿಗ್ಗೆ 10.30ಕ್ಕೆ ಭಾನುವಾರದಂದು ಆಯೋಜಿಸಲಾಗಿದೆ.


ಕೊಡುಗೈದಾನಿ ಯುವ ನೇತಾರ ಬಾಲಕೃಷ್ಣ ನಾಯಕ್ ಕಾರ್ಯಕ್ರಮ ಉದ್ಘಾಟಿಸಲಿದ್ದು ಕರ್ನಾಟಕ ರಾಜ್ಯ ಧನಗರ ಗೌಳಿ ಯುವ ಸೇನೆ ರಾಜ್ಯಾಧ್ಯಕ್ಷ ಸಂತೋಷ ವರಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ, ಕರ್ನಾಟಕ ರಾಜ್ಯ ಧನಗರ ಗೌಳಿ ಸಮುದಾಯ ರಾಜ್ಯಾಧ್ಯಕ್ಷ ದೇವು ಪಾಟೀಲ, ಗೌರವಾಧ್ಯಕ್ಷ ಲಕ್ಷ್ಮಣ ಬೊಡಕೆ ಘನ ಉಪಸ್ಥಿತಿ ಇರಲಿದ್ದು ಮುಖ್ಯ ವಕ್ತಾರರಾಗಿ ಧನಗರ ಗೌಳಿ ಯುವ ಒಕ್ಕೂಟದ ಮಾಜಿ ರಾಜ್ಯಾಧ್ಯಕ್ಷ ಸಿದ್ದು ತೋರಥ್ ಆಗಮಿಸುತ್ತಿದ್ದು ಸಮುದಾಯದ ಹಲವು ಪ್ರಮುಖರು ಹಿರಿಯರು ಮುಖ್ಯಾತಿಥಿಗಳಾಗಿ ಹಾಗು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಈ ಮಹತ್ವದ ಕಾರ್ಯಕ್ರಮದಲ್ಲಿ ಸಮುದಾಯದ ಸರ್ವರು ಹಾಗು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಯಾಗಿಸಬೇಕೆಂದು ಕರ್ನಾಟಕ ರಾಜ್ಯ ಧನಗರ ಗೌಳಿ ಯುವ ಸೇನೆ ರಾಜ್ಯ ಖಜಾಂಚಿ ಲಕ್ಷ್ಮಣ ಕೋಕರೆ ಪ್ರತಿಧ್ವನಿಯಲ್ಲಿ ಮನವಿ ಮಾಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ …

Leave a Reply

Your email address will not be published. Required fields are marked *