Breaking News

ಯಲ್ಲಾಪುರ ವೈಟಿಎಸ್ಎಸ್ ವಿದ್ಯಾರ್ಥಿ ಸಂಸತ್ ಚುನಾವಣೆ ಭವಿಕ್ ಬಾಲಕೃಷ್ಣ ನಾಯಕ್ ಅವಿರೋಧ ಆಯ್ಕೆ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ವೖ. ಟಿ. ಎಸ್. ಎಸ್ ನ ಕಾಲೇಜು ವಿಭಾಗದ ವಿದ್ಯಾರ್ಥಿ ಸಂಸತ್ ಚುನಾವಣೆಯು ಶನಿವಾರ ನಡೆಯಿತು.


ಪ್ರಧಾನ ಕಾರ್ಯದರ್ಶಿಯಾಗಿ ಭವಿಕ್ ಬಾಲಕೃಷ್ಣ ನಾಯಕ ಅವಿರೋಧ ಆಯ್ಕೆಯಗಿದ್ದು ಮಹಿಳಾ ಪ್ರತಿನಿಧಿಯಾಗಿ ತನಿಶಾ ರವಿ ಶೇಟ್, ಸಾಂಸ್ಕೃತಿಕ ಪ್ರತಿನಿಧಿಗಳಾಗಿ ನಾಗರಾಜ ಎಸ್ ಶಾನಭಾಗ ಮತ್ತು ಸುಮನ ಚವ್ಹಾಣ, ಕ್ರೀಡಾ ಪ್ರತಿನಿಧಿಗಳಾಗಿ ಅನ್ಶ್ ಎಸ್ ಪತ್ತಾರ ಮತ್ತು ಶ್ರೀದೇವಿ ಗಂಗಾನಾಯ್ಕ ಆಯ್ಕೆಯಾಗಿರುತ್ತಾರೆ.


ಪ್ರಾಂಶುಪಾಲ ಆನಂದ ಹೆಗಡೆ ಮಾರ್ಗದರ್ಶನದಲ್ಲಿ ಚುನಾವಣಾಧಿಕಾರಿ ಪರವೀನಬಾನು ಸುಂಕದ ಹಾಗೂ ಎಲ್ಲ ಉಪನ್ಯಾಸಕರ ಸಹಕಾರದಿಂದ ಚುನಾವಣೆ ಯಶಸ್ವಿಯಾಗಿ ಮುಕ್ತಾಯ ಗೊಂಡಿತು.
ಸಂಸ್ಥೆಯ ಅಧ್ಯಕ್ಷರು ಹಾಗೂ ಪಧಾಧಿಕಾರಿಗಳು ಪ್ರಾಂಶುಪಾಲರು, ಉಪನ್ಯಾಸಕರು ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ …

Leave a Reply

Your email address will not be published. Required fields are marked *