Breaking News

ಮಂಗಳೂರು ಹೈಕೋರ್ಟ್ ಸಂಚಾರಿ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ – ಅಖಿಲ ಕರ್ನಾಟಕ ಅಹಿಂದ ವೇದಿಕೆ ವಿರೋಧ – ದ್ಯಾಮಣ್ಣ ಬೋವಿ ವಡ್ಡರ್

ಪ್ರತಿಧ್ವನಿ ಯಲ್ಲಾಪುರ : ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಆರಂಭಿಸಲು ಸರಕಾರ ಮುಂದಾಗಿದ್ದು ಉತ್ತರ ಕನ್ನಡ ಜಿಲ್ಲೆಯನ್ನು ಅದರ ವ್ಯಾಪ್ತಿಗೆ ಸೇರಿಸಲು ಹೊರಟಿರುವುದಕ್ಕೆ ನಮ್ಮ ಸಂಘಟನೆ ಬಲವಾಗಿ ವಿರೋದಿಸುತ್ತದೆ ಈ ಸಂಬಂಧ ಯಾವುದೇ ಸಂಘಟನೆಗಳು ಹೋರಾಟಕ್ಕೆ ಮುಂದಾದರೆ ಅದಕ್ಕೆ ಅಖಿಲ ಕರ್ನಾಟಕ ಅಹಿಂದ ಸಂಘಟನೆ ಸಂಪೂರ್ಣ ಬೆಂಬಲ ನೀಡಿ ಹೋರಾಟದಲ್ಲಿ ಪಾಲ್ಗೊಳ್ಳಲಿದೆ ಎಂದು ಅಖಿಲ ಕರ್ನಾಟಕ ಅಹಿಂದ ವೇದಿಕೆ ಸ್ಥಾಪಕಾಧ್ಯಕ್ಷ ದ್ಯಾಮಣ್ಣ ಬೋವಿ ವಡ್ಡರ್ ಪ್ರತಿಧ್ವನಿಗೆ ಪ್ರತಿಕ್ರಿಯಿಸಿದ್ದಾರೆ.

ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ತಾಲ್ಲೂಕುಗಳಿಗೆ ಈ ವಿಚಾರ ಭವಿಷ್ಯದಲ್ಲಿ ಗಂಭೀರ ಸ್ವರೂಪದ ಸಮಸ್ಯೆಗಳನ್ನು ತಂದೊಡ್ಡಲಿದೆ. ಬಡ ಮಧ್ಯಮವರ್ಗದ ಜನರ ಬದುಕು ನಿತ್ಯ ದುಡಿಮೆಯ ಸಂಪಾದನೆಯಲ್ಲಿ ನಡೆಯುತ್ತದೆ. ನ್ಯಾಯಾಲಯ ಸಂಬಂದ ಮಂಗಳೂರು ಹೋಗಿ ಬರಲು ಆಗುವ ವೆಚ್ಚ,ಸಮಯ ಎಲ್ಲವು ಬದುಕಿನ ಮೇಲೆ ಬರೆ ಎಳೆಯಲಿದೆ. ಜಿಲ್ಲೆಯ ಜನತೆಯು ಸಹ ಈ ನಡೆಯನ್ನು ಸಾಮೂಹಿಕವಾಗಿ ವಿರೋದಿಸಬೇಕಿದ್ದು ಅಹಿಂದ ವೇದಿಕೆ ಜಿಲ್ಲೆಯ ಪರವಾದ ಹೋರಾಟದಲ್ಲಿ ತೊಡಗಿಸಿಕೊಳ್ಳಲಿದೆ ಎಂದು ತಿಳಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಸಾಂತ್ವನ ಹೇಳಿದ ಶಾಸಕ ಹೆಬ್ಬಾರ್ ಮತ್ತು ಪುತ್ರ ವಿವೇಕ್ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಮುಂಡಗೋಡ ತಾಲ್ಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ಬುಧವಾರ ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ, ಬಸ್ ಚಾಲಕ …

Leave a Reply

Your email address will not be published. Required fields are marked *