Breaking News

ಪ್ರಸ್ತಾಪಿತ ಮಂಗಳೂರು ಉಚ್ಚ ನ್ಯಾಯಾಲಯದ ಪೀಠಕ್ಕೆ ಉತ್ತರ ಕನ್ನಡ ನನ್ನ ವಿರೋಧವಿದೆ – ಸಂಸದ ಕಾಗೇರಿ.

ಪ್ರತಿಧ್ವನಿ ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ನ್ಯಾಯಾಲಯದ ಅಧಿಕಾರ ವ್ಯಾಪ್ತಿಯನ್ನು ಪ್ರಸ್ತಾಪಿತ ಮಂಗಳೂರು ಉಚ್ಚ ನ್ಯಾಯಾಲಯದ ಪೀಠಕ್ಕೆ ಸೇರಿಸುವ ಪ್ರಸ್ತಾವನೆಯನ್ನು ನಾನು ತೀವ್ರವಾಗಿ ವಿರೋಧಿಸುತ್ತೇನೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಕಳೆದ 18 ವರ್ಷಗಳಿಂದ ನಮ್ಮ ಜಿಲ್ಲೆಯು ಧಾರವಾಡ ಉಚ್ಚ ನ್ಯಾಯಾಲಯ ಪೀಠದ ವ್ಯಾಪ್ತಿಯಲ್ಲಿದ್ದು, ಮುಂದೆಯೂ ಧಾರವಾಡ ಪೀಠದಲ್ಲೇ ಮುಂದುವರಿಯಬೇಕು ಎಂಬುದು ಜಿಲ್ಲೆಯ ಸಮಸ್ತ ಸಾರ್ವಜನಿಕರ ಹಾಗೂ ವಕೀಲರ ನ್ಯಾಯಯುತ ಮತ್ತು ಒಮ್ಮತದ ಬೇಡಿಕೆಯಾಗಿದೆ. ಈ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ, ಉತ್ತರ ಕನ್ನಡ ಜಿಲ್ಲೆಯ ಪ್ರಾದೇಶಿಕ ಹಿತದೃಷ್ಟಿಯಿಂದ ಜಿಲ್ಲೆಯನ್ನು ಧಾರವಾಡ ಪೀಠದಲ್ಲೇ ಮುಂದುವರಿಸಬೇಕೆಂದು ಕೋರಿ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಿಗೆ ಈಗಾಗಲೇ ಪತ್ರದ ಮೂಲಕ ಮನವಿ ಸಲ್ಲಿಸಿದ್ದೇನೆ.

ನಮ್ಮ ಜಿಲ್ಲೆಯ ಭೌಗೋಳಿಕ ಅಂತರ ಹಾಗೂ ಸಾರಿಗೆ ಅನುಕೂಲತೆಯ ದೃಷ್ಟಿಯಿಂದ ಕಾರವಾರ, ಹಳಿಯಾಳ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಸಾರ್ವಜನಿಕರಿಗೆ ಮಂಗಳೂರಿಗಿಂತ ಧಾರವಾಡ ತಲುಪುವುದು ಅತ್ಯಂತ ಸುಲಭ ಹಾಗೂ ಸಮಯ ಉಳಿತಾಯವಾಗುತ್ತದೆ. ‘ನ್ಯಾಯ ಮನೆಬಾಗಿಲಿಗೆ ತಲುಪಬೇಕು’ ಎಂಬ ತತ್ತ್ವದಡಿಯಲ್ಲೂ ಧಾರವಾಡ ಪೀಠವೇ ನಮಗೆ ಅತ್ಯಂತ ಸಮೀಪ ಹಾಗೂ ಸೂಕ್ತವಾಗಿದೆ.
ಆದ್ದರಿಂದ, ಜನಸಾಮಾನ್ಯರ ಹಾಗೂ ಕಕ್ಷಿದಾರರ ಹಿತ ಕಾಯುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಯಾವುದೇ ಕಾರಣಕ್ಕೂ ಪ್ರಸ್ತಾಪಿತ ಮಂಗಳೂರು ಪೀಠಕ್ಕೆ ಸೇರಿಸದೆ, ಧಾರವಾಡ ಉಚ್ಚ ನ್ಯಾಯಾಲಯದ ಪೀಠದಲ್ಲೇ ಮುಂದುವರಿಸುವಂತೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳು ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದು ಮಾದ್ಯಮ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಸ್ ಅಪಘಾತದಲ್ಲಿ ಗಾಯಗೊಂಡವರಿಗೆ ಸಾಂತ್ವನ ಹೇಳಿದ ಶಾಸಕ ಹೆಬ್ಬಾರ್ ಮತ್ತು ಪುತ್ರ ವಿವೇಕ್ ಹೆಬ್ಬಾರ್.

ಪ್ರತಿಧ್ವನಿ ಯಲ್ಲಾಪುರ : ಮುಂಡಗೋಡ ತಾಲ್ಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ಬುಧವಾರ ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ, ಬಸ್ ಚಾಲಕ …

Leave a Reply

Your email address will not be published. Required fields are marked *