Breaking News

ಚಂದಗುಳಿ ಗ್ರಾಮ ಪಂಚಾಯತ ಮಟ್ಟದಲ್ಲಿ “ಅಖಿಲ ಕರ್ನಾಟಕ ಅಹಿಂದ ವೇದಿಕೆ” ನೂತನ ಘಟಕ ಅಸ್ತಿತ್ವಕ್ಕೆ.


ಪ್ರತಿಧ್ವನಿ ಯಲ್ಲಾಪುರ : ರಾಜ್ಯದಾದ್ಯಂತ ಅಸ್ತಿತ್ವಕ್ಕೆ ತರಲು ಹೊರಟಿರುವ “ಅಖಿಲ ಕರ್ನಾಟಕ ಅಹಿಂದ ವೇದಿಕೆ ” ಗ್ರಾಮೀಣ ಭಾಗದಿಂದ ಪ್ರಾರಂಭಿಸಲು ನಿರ್ಧರಿಸಿ ಮೊದಲಿಗೆ ಯಲ್ಲಾಪುರ ತಾಲೂಕಿನ ಚಂದಗುಳಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಅಹಿಂದ ವೇದಿಕೆ  ಘಟಕವನ್ನು ಶನಿವಾರ ವಿದ್ಯುಕ್ತವಾಗಿಉದ್ಘಾಟಿಸಲಾಯಿತು.


ಚಂದಗುಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಖಿಲ ಕರ್ನಾಟಕ ಅಹಿಂದ ವೇದಿಕೆ ಘಟಕದ ಅಧ್ಯಕ್ಷರಾಗಿ ಈಶ್ವರ ಪಟಗಾರ್, ಉಪಾಧ್ಯಕ್ಷರುಗಳಾಗಿ ಸಂತೋಷ ಹೆಗಡೆ, ನರಸಿಂಹ ದುರ್ಗಾ ಸಿದ್ದಿ, ಈರಪ್ಪ ನಾಗಪ್ಪ ಬೋವಿ ವಡ್ಡರ್ ಹಾಗು ಕಾರ್ಯದರ್ಶಿಯಾಗಿ ಯೋಗೇಶ್ ಪುಟ್ಟಾ ನಾಯ್ಕ್ ಆಯ್ಕೆಯಾದರು.


ಪಿ.ಎಲ್‌.ಡಿ ಬ್ಯಾಂಕ್ ಅಧ್ಯಕ್ಷ ಆರ್.ಎಸ್.ಭಟ್ ನೂತನ ಘಟಕ ಉದ್ಘಾಟಿಸಿ ಅಧ್ಯಕ್ಷ ,ಉಪಾಧ್ಯಕ್ಷ ಪಧಾದಿಕಾರಿಗಳಿಗೆ ಶುಭಕೋರಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಟಿ.ಎಂ.ಎಸ್ ನಿರ್ದೇಶಕ ಅಪ್ಪು ಆಚಾರಿ, ಗುತ್ತಿಗೆದಾರ ಸಂತೋಷ್ ನಾಯ್ಕ್, ಅಖಿಲ ಕರ್ನಾಟಕ ಅಹಿಂದ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಹೆಚ್ ದೇಸಳ್ಳಿ ಉಪಸ್ಥಿತರಿದ್ದು ನೂತನ ಸಂಘಟನೆಗೆ ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಅಹಿಂದ ವೇದಿಕೆ ಸಂಸ್ಥಾಪಕ ಅಧ್ಯಕ್ಷ ದ್ಯಾಮಣ್ಣ ಬೋವಿ ವಡ್ಡರ್ ವಹಿಸಿ ಸಂಘಟನೆಯ ಬದ್ದತೆ ಮತ್ತು ಶಿಸ್ತಿನ ಬಗ್ಗೆ ನೂತನ ಘಟಕದ ಅಧ್ಯಕ್ಷ ಉಪಾಧ್ಯಕ್ಷ ಪಧಾದಿಕಾರಿಗಳಿಗೆ ಕಿವಿಮಾತು ಹೇಳಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ …

Leave a Reply

Your email address will not be published. Required fields are marked *