Breaking News

ಯಲ್ಲಾಪುರ ನ್ಯಾಯಾಲಯದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಲೋಕ್ ಅಧಾಲತ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ‌ಲೇಖಲಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಯಲ್ಲಾಪುರ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು.


ಲೋಕ್ ಅದಾಲತ್‌ನಲ್ಲಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಜಿ.ಬಿ ಹಳ್ಳಕಾಯಿ ಮತ್ತು ಹಿರಿಯ ಸಿವಿಲ್ ನ್ಯಾಯಾಲಯದ ಅಡಿಯಲ್ಲಿ ದಾಖಲಾದ ಒಟ್ಟು 72 ಪ್ರಕರಣಗಳಲಿ ಒಟ್ಟು 17 ಪ್ರಕರಣಗಳು ಇತ್ಯರ್ಥವಾದವು. ಸಂಧಾನಕಾರರಾಗಿ ವಕೀಲ ರವಿ ಶಿವನಗೌಡ ಪಾಟೀಲ ಕಾರ್ಯ ನಿರ್ವಹಿಸಿದರು. ಇದರಿಂದ ಸರ್ಕಾರಕ್ಕೆ 69,68,670 ರೂ ಭರಣ ಮಾಡಲಾಯಿತು.


ಗೌರವಾನ್ವಿತ ಸಿವಿಲ್ ನ್ಯಾಯಾಧೀಶರಾದ ಲಕ್ಷ್ಮೀಬಾಯಿ ಬಸನಗೌಡ ಪಾಟೀಲ ಅವರು ಸಿವಿಲ್ ನ್ಯಾಯಾಲಯದಲ್ಲಿ ದಾಖಲಾದ ಮತ್ತು 1153 ಪ್ರಕರಣಗಳಲ್ಲಿ 1044 ಪ್ರಕರಣಗಳನ್ನು ಇತ್ಯರ್ಥಪಡಿಸಿದರು. ಸಂಧಾನಕಾರರಾಗಿ ವಕೀಲ ನಾಗೇಶ್ ಕೆ ಭಾಗ್ವತ ಕಾರ್ಯ ನಿರ್ವಹಿಸಿದರು. ಇದರಿಂದ ಸರ್ಕಾರಕ್ಕೆ 22,81,667 ರೂ ಭರಣ ಮಾಡಲಾಯಿತು.
ಈ ಸಂದರ್ಭದಲ್ಲಿ ಎಲ್ಲಾ ಹಿರಿಯ ವಕೀಲರು, ಸರ್ಕಾರಿ ವಕೀಲರು, ಸೊಸೈಟಿ ಹಾಗೂ ಬ್ಯಾಂಕಿನ ಅಧಿಕಾರಿಗಳು, ಕಕ್ಷಿದಾರರು ಮತ್ತು ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದು ರಾಷ್ಟಿçÃಯ ಲೋಕ್ ಅದಾಲತ್ ಯಶಸ್ವಿಗೊಳಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *