Breaking News

ಮಳೆಯಿಂದಾದ ಸಮಸ್ಯೆಗಳಿದ್ದಲ್ಲಿ ಬಗೆಹರಿಸಲು ಪಟ್ಟಣ ಪಂಚಾಯತ ಸಿದ್ದ – ಗುರು ಗಡಗಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನಲ್ಲ್ಲಿ ಈ ವರ್ಷ ಹೇಳಿಕೊಳ್ಳುವಂತಹ ಮಳೆ ಬೀಳದ ಕಾರಣ ಅಂತಹ ಸಮಸ್ಯೆಗಳೇನು ಸೃಷ್ಟಿಯಾಗಿಲ್ಲ. ಆದರು ಪಟ್ಟಣ ಪಂಚಾಯತ ಎಲ್ಲೆಲ್ಲಿ ಸಮಸ್ಯೆ ಉದ್ಬವವಾಗಬಹುದೋ ಅಂತಹ ಸ್ಥಳಗಳಲ್ಲಿ ದುರಸ್ತಿ ಕಾರ್ಯ ಕೈಗೊಂಡು ಮುನ್ನೆಚ್ಚರಿಕೆ ಕೆಲಸಗಳನ್ನು ಮಾಡುತ್ತ್ತಿದೆ.

ಪಟ್ಟಣದ ಉದ್ಯಮ ನಗರದಲ್ಲಿ ಗುಡ್ಡಪ್ರದೇಶದಲ್ಲಿ ಮನೆಗಳ ಬಳಿ ಗಟಾರವಿಲ್ಲದೆ ನೀರು ಮನೆಗಳಿಗೆ ನುಗ್ಗುವ ಭೀತಿಯ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತ ಸಿಬ್ಬಂದಿಗಳು ಜೆಸಿಬಿ ಬಳಸಿ ತಾತ್ಕಲಿಕ ವ್ಯವಸ್ಥೆ ಮಾಡಿ ನೀರು ಮನೆಗಳಿಗೆ ನುಗ್ಗದಂತೆ ಕ್ರಮ ಕೈಗೊಂಡಿದ್ದಾರೆ.

ಮಂಜುನಾಥ ನಗರದಲ್ಲಿ ನೀರು ಸರಾಗವಾಗಿ ಹರಿಯುವಂತೆ ಗಟಾರ ಸ್ವಚ್ಛಗೊಳಿಸಿದ್ದಾರೆ. ಭಾರೀ ಪ್ರಮಾಣದಲ್ಲಿ ಮಳೆ ಬೀಳಬೇಕಿದ್ದ ಸಮಯದಲ್ಲಿ ಮಳೆಯೇ ಇಲ್ಲವಾಗಿದ್ದು ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಲು ಅನುಕೂಲವಾಗಿದೆ.

  ಪಟ್ಟಣ ವ್ಯಾಪ್ತಿಯಲ್ಲಿ ಮಳೆ ನೀರು ಮನೆಗೆ ನುಗ್ಗುವುದು, ಗಟಾರ ಕಟ್ಟಿಕೊಂಡಿರುವುದು ಇನ್ನಿತರೆ ಸಮಸ್ಯೆಗಳಿದ್ದಲ್ಲಿ ತಕ್ಷಣ ಪಟ್ಟಣ ಪಂಚಾಯತದ ಗಮನಕ್ಕೆ ತಂದರೆ ಸಾಧ್ಯವಾದಷ್ಟು ಶೀಘ್ರದಲ್ಲಿ ಸಮಸ್ಯೆ ಬಗೆಹರಿಸಲು ಅನುಕೂಲವಾಗಲಿದೆ. ಆದರೆ ಭಾರೀ ಪ್ರಮಾಣದಲ್ಲಿ ಮಳೆ ಬಂದು ಇಂತಹ ಸಮಸ್ಯೆಗಳು ಉದ್ಭವವಾದಾಗ ತಿಳಿಸಿದರೆ ಸುಲಲಿತ ಕಾಮಗಾರಿ ಸಾಧ್ಯವಾಗದು. – ಗುರು ಗಡಗಿ‌ಪ.ಪಂ ಆರೋಗ್ಯ ನಿರೀಕ್ಷಕ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *