Breaking News

ಅರಬೈಲ್ ಘಟ್ಟದಲ್ಲಿ ಬೆಳ್ಳುಳ್ಳಿ ತುಂಬಿದ ಲಾರಿ ಪಲ್ಟಿ – ಡೀಸಲ್ ಹರಿದು ಹಾಳಾದ ಹೆದ್ದಾರಿ.!!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಬೆಳ್ಳುಳ್ಳಿ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ರಸ್ತೆ ಪಕ್ಕ ಬಿದ್ದಿದ್ಷು ಲಾರಿಯಲಿದ್ದ ಬೆಳ್ಳುಳ್ಳಿ ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾಗಿದೆ.

ಬೆಳ್ಳುಳ್ಳಿ ಲಾರಿ ಅಪಘಾತ ವಿಡಿಯೋ ದೃಶ್ಯಾವಳಿ ನೋಡಬೇಕ ಇದನ್ನು ಒತ್ತಿ


ರಾಜಸ್ಥಾನದಿಂದ ಬೆಳ್ಳುಳ್ಳಿ ತುಂಬಿಕೊಂಡು ಕೆರಳ ಸಾಗುತ್ತಿದ್ದ ಲಾರಿ ಅರಬೈಲ್ ಘಟ್ಟದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಬಿದ್ದಿದೆ.

ಸಂಚಾರಕ್ಕೆ ಯಾವುದೆ ತೊಡಕಾಗಿಲ್ಲ ಆದರೆ ಲಾರಿ ಡೀಸೆಲ್‌ ಟ್ಯಾಂಕ್ ನಿಂದ ಡಿಸೆಲ್ ಸೋರಿಕೆಯಾಗಿ ರಸ್ತೆ ತುಂಬಾ ಹರಿದು ಆತಂಕ ಸೃಷ್ಡಿಯಾಗಿತ್ತು ಹಾಗು ಈ ರೀತಿ ಇಂದನ ರಸ್ತೆಗೆ ಚೆಲ್ಲಿದರೆ ಟಾರ್ ಸಲೀಸಾಗಿ ಕಿತ್ತುಬಂದು ಹೆದ್ದಾರಿ ಹಾಳಾಗುತ್ತದೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎನ್ನುತ್ತಾರೆ ಹೆದ್ದಾರಿ ನಿರ್ವಹಣೆ ಮಾಡುವ ಸಿಬ್ಬಂದಿ.


ಕ್ರೇನ್ ಬಳಸಿ ಲಾರಿಯನ್ನು ಮೇಲಕ್ಕೆತ್ತಿ ಅದೇ ಲಾರಿಯಲ್ಲಿ ಮತ್ತೆ ಬೆಳ್ಳುಳ್ಳಿ ತುಂಬಲಾಗಿದೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *