




ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ – ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ೧೦೭ನೆಯ ವಾರ್ಷಿಕಾಧಿವೇಶನ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯಲ್ಲಿರುವ ಶ್ರೀ ರಾಘವೇಂದ್ರ ಜ್ಞಾನಮಂದಿರದಲ್ಲಿ ನಡೆಯಿತು.

ಕ.ಸಾ.ಪ ರಾಜ್ಯಾಧ್ಯಕ್ಷ ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ ೧೦.೩.೨೪ರಂದು ನಡೆದ ವಾರ್ಷಿಕ ಸಭೆಯ ಸಂದರ್ಭದಲ್ಲಿ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಮಾರ್ಗದರ್ಶಿ ಸಮಿತಿಯ ವೇಣುಗೋಪಾಲ ಮದ್ಗುಣಿಯವರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗೌ.ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟಿ ,ಡಾ.ಪದ್ಮಿನಿ ನಾಗರಾಜ,ಗೌಡ.ಕೋಶಾಧ್ಯಕ್ಷರಾದ ಬಿ.ಎಂ.ಪಟೇಲಪಾಂಡು,ವಿವಿಧ ಜಿಲ್ಲೆಗಳಿಂದ ಆಗಮಿಸಿದ ಜಿಲ್ಲಾಧ್ಯಕ್ಷರು ಹಾಗು ತಾಲೂಕಾಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.


Prathidvani Yellapura