Breaking News

ಬೀದಿಗೆ ಬಂದ ಯಲ್ಲಾಪುರ ಟಿ.ಎಂ.ಎಸ್ ಆಡಳಿತಾಧಿಕಾರಿ ವಿರುದ್ದದ ಜಟಾಪಟಿ – ರಸ್ತೆ ತಡೆ ನಡೆಸಿದ ರೈತರು.


ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲಿ ಒಂದಾದ ಟಿ.ಎಂ.ಎಸ್ ಆಡಳಿತಾಧಿಕಾರಿ ನಡೆಯ ವಿರುದ್ದ ರೈತರು ಸಿಡಿದಿದ್ದು ಗುರುವಾರ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದರು.


ಹಿರಿಯ ಸಹಕಾರಿ ಸಂಸ್ಥೆಯ ಮಾಜಿ ಅಧ್ಯಕ್ಷ ನಾರಾಯಣ ಭಟ್ ಅಗ್ಗಾಶಿಕುಂಬ್ರಿ ಸ್ಥಳೀಯ ಶಾಸಕರ ವಿರುದ್ದ ನೇರ ವಾಗ್ದಾಳಿ ನಡೆಸಿ ಅತ್ಯಂತ ಸುಭದ್ರ ಹಾಗು ರೈತ ಸ್ನೇಹಿ ಟಿ.ಎಂ‌.ಎಸ್ ಸಂಸ್ಥೆಯ ಅಸ್ತಿತ್ವಕ್ಕೆ ಧಕ್ಕೆ ತರುವ ಹುನ್ನಾರ ನಡೆಸುತ್ತಿದ್ದು ಅದರ ಭಾಗವಾಗಿ ಇಲ್ಲಸಲ್ಲದ ನಡೆಯನ್ನು ಪರೋಕ್ಷವಾಗಿ ಆಡಳಿತಾಧಿಕಾರಿ ಕೈಯಲ್ಲಿ ಮಾಡಿಸುತ್ತಿದ್ದಾರೆ.ಇದು ತಾಲ್ಲೂಕಿನ ಜನತೆಗೆ ಅರ್ಥವಾಗಿದೆ. ಸಂಸ್ಥೆಯ ಉಳಿವಿಗಾಗಿ ನಾನು ಯಾವ ತ್ಯಾಗಕ್ಕು ಸಿದ್ದನಿದ್ದು ರೈತರಿಗಾಗುವ ಅನ್ಯಾಯ ಸಹಿಸಲಾಗದು. ಹಿಂಬದಿಯ ರಾಜಕಾರಣ ಮಾಡುವವರ ಮುಂದೆ ನೇರ ಸಂವಾದಕ್ಕೆ ನಾನು ಸಿದ್ದನಿದ್ದೇನೆ. ತತಕ್ಷಣದಿಂದ ಆಡಳಿತಾಧಿಕಾರಿಯನ್ನು ಸರ್ಕಾರ ಕಿತ್ತೊಗೆಯಬೇಕು ಇಲ್ಲವಾದಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.


ಟಿ.ಎಂ.ಎಸ್ ಸಂಸ್ಥೆಯ ಅವನತಿಗೆ ಸಂಚು ರೂಪಿಸುತ್ತಿರುವ ತಂಡಕ್ಕೆ ಇದು ಎಚ್ಚರಿಕೆಯ ಗಂಟೆಯಾಗಿದ್ದು ತಾಲ್ಲೂಕಿನ ರೈತರ ಒಕ್ಕೊರಲ ಆಗ್ರಹವಾಗಿದ್ದು ತಕ್ಷಣಕ್ಕೆ ಆಡಳಿತಾಧಿಕಾರಿಯನ್ನು ಸರ್ಕಾರ ಬದಲಿಸಬೇಕಿದೆ ಎಂದು ಜಿಲ್ಲಾ ಪಂಚಾಯತ ಮಾಜಿ ಸದಸ್ಯ ರಾಘುಭಟ್ಟ,ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ್ ಹೆಗಡೆ, ಸುಬಣ್ಣಉದ್ದಾಬೈಲ್, ನರಸಿಂಹ ಭಟ್ ಇನ್ನಿತರ ಪ್ರಮುಖರು ಪ್ರತಿಭಟನೆ ಸಭೆಯನುದ್ದೇಶಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ತಾಲೂಕಿನ ಹಲವು ರೈತರು,ಸಂಸ್ಥೆಯ ಸದಸ್ಯರು, ಹಿತೈಷಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿತ್ತು. ಕೆಲಕಾಲ ರಸ್ತೆ ತಡೆ ನಡೆಸಿದ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಕಚ ಅಡಚಣೆಯಾಯಿತೆ ಹೊರತು ಯಾವುದೆ ಸಮಸ್ಯೆ ಉದ್ಬವಿಸಲಿಲ್ಲ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದಲ್ಲೊಂದು ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೆ ಸಾವು- ಹಿಂಬದಿ ಸವಾರನಿಗೆ ಗಂಭೀರ ಗಾಯ.

ಪ್ರತಿಧ್ವನಿ ಯಲ್ಲಾಪುರ : ಪಟದಟಣದ ಹೊರವಲಯ ಮಗೋಡು ಕ್ರಾಸ್ ಸಮೀಪ ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ …

Leave a Reply

Your email address will not be published. Required fields are marked *