Breaking News

ಯಲ್ಲಾಪುರ ತಾಲೂಕು ಕಾಂಗ್ರೆಸ್ ಪಕ್ಷ ಸಂಘಟನೆಗೆ ನೂತನ‌ ಸಮಿತಿ ಪಟ್ಟಿ ಬಿಡುಗಡೆ.


ಪ್ರತಿಧ್ವನಿ ಯಲ್ಲಾಪುರ : ರಾಜ್ಯದಲ್ಲಿ ಅತಿ ಶೀಘ್ರದಲ್ಲಿ ವಿವಿಧ ಹಂತದ ಚುನಾವಣೆ ಎದುರಾಗಲಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ.
ಯಲ್ಲಾಪುರ ತಾಲೂಕಿನಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪ್ರಬಲವಾದ ಕಾರ್ಯಕರ್ತರ ಪಡೆ ಹೊಂದಿದ್ದು ಮತ್ತಷ್ಟು ಪಕ್ಷ ಸಂಘಟನೆಗೆ ಒತ್ತು ನೀಡಿ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದ್ದಾರೆ.

ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್.ಭಟ್ ನೂತನ ಪಟ್ಟಿ ಬಿಡುಗಡೆ ಮಾಡಿ ಸಮಿತಿ ಸದಸ್ಯರು ತಮ್ಮ ತಮ್ಮ ಕಾರ್ಯಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಕರೆ ನೀಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ತೋಟಗಾರಿಕ ಇಲಾಖೆ ಪರಿಸರದಲ್ಲಿ ಮಕರಂದ ಕ್ರೂಡಿಕರಣ – ನೂರಾರು ಜೇನಿನ ಪೆಟ್ಟಿಗೆಗಳ ಅನಾವರಣ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ನಾಯ್ಕನ ಕೆರೆ ಬಳಿ ಇರುವ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ,ಮಾವಿನ ತೋಟದ ನಡುವೆ ನೂರಾರು ಸಂಖ್ಯೆಯಲ್ಲಿ …

Leave a Reply

Your email address will not be published. Required fields are marked *