Breaking News

ಯಲ್ಲಾಪುರದ ಕೆಬಿ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ರಂಜಾನ್ ಸಾಮೂಹಿಕ ಪ್ರಾರ್ಥನೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಬಳ್ಳಾರಿ-ಕಾರವಾರ ಹೆದ್ದಾರಿ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ನೂರಾರು ಮುಸ್ಲಿಂ ಬಾಂಧವರು ಸೇರಿ ಅಲ್ಲಾಹುಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.


ಸುಮಾರು ಮೂವತ್ತು ದಿನಗಳ ಉಪವಾಸ ಮಾಡಿ ಶುಕ್ರವಾರ ಚಂದ್ರ ದರ್ಶನ ಪಡೆದು ಗುರುವಾರ ಬೆಳಗ್ಗೆ 9-30 ರ ಸುಮಾರಿಗೆ ಸಮುದಾಯದ ಧರ್ಮ ಗುರುಗಳ ನೇತೃತ್ವದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಒಬ್ಬರಿಗೊಬ್ಬರು ಆಲಿಂಗಿಸಿಕೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.


ನಂತರ ಪಟ್ಟಣದ ಹೊರವಲಯದಲ್ಲಿರುವ ಖಬರಸ್ಥಾನದಲ್ಲಿ ತಮ್ಮ ತಮ್ಮ ಕುಟುಂಬದ ಮೃತರ ಸಮಾಧಿ ಬಳಿ ಹೂ ಹಾಕಿ ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ ಯಲ್ಲಾಪುರ ಕಾಳಮ್ಮ ನಗರ ಕೆಲವು  ನಿವಾಸಿಗಳಿಗೆ ವಿದ್ಯುತ್ ನೀಡದ ಸಮಸ್ಯೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದ ಕಾಳಮ್ಮನಗರದ ಮುರಾರ್ಜಿ ವಸತಿ ಶಾಲೆ …

Leave a Reply

Your email address will not be published. Required fields are marked *