
ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟ ಪ್ರದೇಶದಲ್ಲಿ ಬೈಕ್ ಮತ್ತು ಬಸ್ಸಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗಳಾಗಿ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಮೃತಪಟ್ಟ ಯುವಕರಿಬ್ಬರು ಯಲ್ಲಾಪುರ ಪಟ್ಟಣದ ತಳ್ಳಿಗೆರೆ ನಿವಾಸಿಗಳಾದ ಮುರ್ತುಜ ಇಮ್ತಿಯಾಜ್ ಮುಲ್ಲಾ (21) ಮತ್ತು ತೌಫಿಕ್ ಜಮೀರ್ ಮುಲ್ಲಾ (18) ಎಂಬುವರಾಗಿದ್ದಾರೆ.

ಗುರುವಾರ ರಂಜಾನ್ ಹಬ್ಬದ ಸಡಗರದ ನಡುವೆ ಬೈಕ್ ಏರಿ ಯಲ್ಲಾಪುರದಿಂದ ಅಂಕೋಲಾ ಕಡೆಗೆ ಸಾಗುವ ವೇಳೆ ಎದುರಿನಿಂದ ಬಂದ ಸಾರಿಗೆ ಸಂಸ್ಥೆ ಬಸ್ ಗೆ ಮುಖಾಮುಖಿ ಡಿಕ್ಕಿಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಯುವಕರಿಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದ್ದು ಸಾವನಪ್ಪಿದ್ದಾರೆ. ಮೃತದೇಹಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಕುಟುಂಬಸ್ತರ ಆಕ್ರಂದನ ಮುಗಿಲು ಮುಟ್ಟಿತ್ತು.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
Prathidvani Yellapura