
ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದ ಶಿರ್ಲೆ ಕ್ರಾಸ್ ಬಳಿ ಅಕ್ಕಿ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ರಸ್ತೆ ತುಂಬಾ ಅಕ್ಕಿ ಚೀಲಗಳು ಹರಡಿ ಬಿದ್ದ ಘಟನೆ ನಡೆದಿದೆ.

ತೆಲಂಗಾಣದಿಂದ ಅಕ್ಕಿ ಪ್ಯಾಕೆಟ್ಗಳನ್ನು ತುಂಬಿಕೊಂಡು ಮಂಗಳೂರು ಹೊರಟಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅರಬೈಲು ಘಟ್ಟದ ಶಿರ್ಲೆ ಕ್ರಾಸ್ ಸಮೀಪ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯ ಮೇಲೆ ಅಡ್ಡಲಾಗಿ ಬಿದ್ದಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಚಾಲಕ ಹಾಗೂ ಸಹಾಯಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿಯುತ್ತಲೇ 108 ಅಂಬುಲೆನ್ಸ್ ತೆರಳಿ ಚಾಲಕ ಮತ್ತು ಸಹಾಯಕನಿಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೆಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
Prathidvani Yellapura