Breaking News

ಕಿರವತ್ತಿ ಸಮೀಪ ಭೀಕರ ರಸ್ತೆ ಅಪಘಾತ ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು


ಯಲ್ಲಾಪುರ : ತಾಲೂಕಿನ ಕಿರವತ್ತಿ ಸಮೀಪ ಒಂಟ್ಮನೆ ಎಂಬಲ್ಲಿ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯ ಮೇಲೆ ಬೈಕ್ ಅಪಘಾತವಾಗಿದ್ದು ಬೈಕಿನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.


ತಂಬೂರು ಮೂಲದ ಸೂರಜ್ ಪಾಲನಕರ್ ಮತ್ತು ಕಿರವತ್ತಿ ಮೂಲದ ಮಂಜುನಾಥ ವೀರಭದ್ರ ಬಡಿಗೇರ ಮೃತ ದುರ್ದೈವಿಗಳಾಗಿದ್ದು ಫೋಟೋ ಶೂಟ್‌ಗಾಗಿ ಯಲ್ಲಾಪುರಕ್ಕೆ ಬಂದವರು ಮುಗಿಸಿ ವಾಪಸ್ ತೆರಳುವ ವೇಳೆ ಕಿರವತ್ತಿ ಸಮೀಪದ ಒಂಟ್ಮನೆ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆಯಲ್ಲಿ ಬಿದ್ದಿದ್ದಾರೆ.

ಅದೇ ಸಮಯಕ್ಕೆ ಲಾರಿಯೊಂದು ಹರಿದ ಪರಿಣಾಮ ಗಂಭೀರ ಗಾಯಗಳಾಗಿ ತಲೆಯ ಮೆದುಳೆಲ್ಲಾ ಹೊರಬಂದು ಸ್ಥಳದಲ್ಲೇ ಇಬ್ಬರೂ ಯುವಕರು ಮೃತಪಟ್ಟಿದ್ದಾರೆಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಇನ್ನೂ ಹೆಚ್ಚಿನ ಮಾಹಿತಿ ಪೊಲೀಸರಿಂದ ತಿಳಿಯಬೇಕಿದೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು ಮುಂದಿನ ತನಿಖೆ ಕೈಗೊಂಡಿರುತ್ತಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *