Breaking News

ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್!   ARM ಟೊವಿನೋ ಥಾಮಸ್ ಅವರ 50ನೇ ಚಿತ್ರ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಬೆಂಗಳೂರು: ಮಿನ್ನಲ್ ಮುರಳಿ’ ಮತ್ತು ‘2018 – ಎವ್ರಿಒನ್ ಈಸ್ ಎ ಹೀರೋ’ ಚಿತ್ರಗಳ ಮೂಲಕ ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಮಲೆಯಾಳಂ ನಟ ಟೊವಿನೋ ಥಾಮಸ್.‌ ಸದಾ ವಿಭಿನ್ನ ಕಥೆ ಆಯ್ಕೆ ಮಾಡಿಕೊಳ್ಳುವ ಜನಪ್ರಿಯ ನಟನೀಗ “ಎಆರ್ಎಂ” (Ajayante Randam Moshanam /ಅಜಯಂತೇ ರಂದಮ್ ಮೋಷನಂ) ಎಂಬ ಫ್ಯಾಂಟಸಿ ಪ್ಯಾನ್ ಇಂಡಿಯಾ ಚಿತ್ರದೊಂದಿಗೆ ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದ್ದಾರೆ.

ಜಿತಿನ್ ಲಾಲ್ ನಿರ್ದೇಶನದ ಚೊಚ್ಚಲ ಚಿತ್ರ. ಸಿನಿಮಾ ಸಂಪೂರ್ಣವಾಗಿ 3ಡಿಯಲ್ಲಿ ತಯಾರಾಗಿದೆ. ಮಲಯಾಳಂ ಇತಿಹಾಸದಲ್ಲೇ ತಾಂತ್ರಿಕ ವಿಷಯದಲ್ಲಿ ಶ್ರೀಮಂತ ಚಿತ್ರಗಳಲ್ಲಿ ಒಂದಾಗಿದೆ. ಈಗಾಗಲೇ ಬಿಡುಗಡೆಯಾಗಿ
ಟ್ರೇಲರ್ ಚಿತ್ರದ ಸುತ್ತಲಿನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಹಿಂಸಾಚಾರ ಮತ್ತು ನಾಯಕನ ಪ್ರವೇಶವನ್ನು ಟ್ರೇಲರ್ನಲ್ಲಿ ತೋರಿಸಲಾಗಿದೆ. ಎಆರ್ಎಂ ಭರ್ಜರಿ ಆ್ಯಕ್ಷನ್ ಸೀನ್ಗಳೊಂದಿಗೆ ಅದ್ಭುತ ಸಿನಿಮೀಯ ಅನುಭವ ನೀಡಲಿದೆ ಎಂಬ ಸುಳಿವನ್ನು ಈ ಟ್ರೇಲರ್ ಕೊಟ್ಟಿದೆ.

ಟೊವಿನೋ ಥಾಮಸ್ ಮೂರು ವಿಭಿನ್ನ ಪಾತ್ರಗಳನ್ನು ಚಿತ್ರಿಸಿದ್ದಾರೆ. ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೂಮಿಯ ಸಂಪತ್ತನ್ನು ರಕ್ಷಿಸುವ ಹೋರಾಟವಿದೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ. ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ.ಎಆರ್ಎಂ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ‌. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ. ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್‌ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪೊಲೀಸರ ಕಾರ್ಯ ಕ್ಷಮತೆ – ವರ್ಷದ ಹಿಂದಿನ ಡಕಾಯಿತಿ ಪ್ರಕರಣ ಆರೋಪಿಗಳು ಸ್ವತ್ತಿನ ಸಹಿತ ಅಂದರ್.!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ …

Leave a Reply

Your email address will not be published. Required fields are marked *