
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಯಲ್ಲಾಪುರ, ಏಪ್ರಿಲ್ 12 : ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು, ಇಂದು ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಹಾಗೂ ಕಿರವತ್ತಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, ಭಾರತೀಯ ಜನತಾ ಪಕ್ಷಕ್ಕೆ ಬೇರೆ ಬೇರೆ ಪಕ್ಷದ ಕಾರ್ಯಕರ್ತರು ಸೇರ್ಪಡೆಯಾಗುತ್ತಿದ್ದಾರೆ. ಬಿಜೆಪಿ ಮೇಲಿನ ಅವರ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ. ಕ್ಷೇತ್ರದಾದ್ಯಂತ ಬಿಜೆಪಿ ಪರವಾದ ಅಲೆ ಇದೆ. ಜನರ ಮನಸ್ಸನ್ನು ಗೆದ್ದು ಮತ್ತೊಮ್ಮೆ ಜಯಭೇರಿ ಸಾಧಿಸಲು ನಾವೆಲ್ಲ ಒಗ್ಗಟ್ಟಿನಿಂದ ಇರೋಣ ಎಂದು ಹೇಳಿದರು.

ಈ ಸಭೆಯಲ್ಲಿ ಮಹಾಶಕ್ತಿಕೇಂದ್ರದ ಅಧ್ಯಕ್ಷರು, ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು, ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಶಕ್ತಿಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.

Prathidvani Yellapura