Breaking News

NPCIL ಕೈಗಾ ನಿಗಮ ಸಾಮಾಜಿಕ ಜವಾಬ್ದಾರಿ ಯೋಜನೆಯ ಕಾಮಗಾರಿ ಕಳಪೆ-ಕ್ರಮಕ್ಕೆ ಆಗ್ರಹ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ: NPCIL ಕೈಗಾದವರು ನಿಗಮ ಸಾಮಾಜಿಕ ಜವಾಬ್ದಾರಿ ಯೋಜನೆ ಅಡಿಯಲ್ಲಿ ಮಾವಿನಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ,ಸಮುದಾಯ ಭವನ,ಶಾಲೆ,ಬ್ರಿಜ್ ಮುಂತಾದ ಕಾಮಗಾರಿಯನ್ನು ಮಾವಿನಮನೆ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಂಡಿದ್ದು ಕಳೆದ ಹಲವಾರು ವರ್ಷಗಳಿಂದ ಕೆಲಸಗಳನ್ನು ಅತ್ಯುತ್ತಮ ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸುತ್ತಾ ಬಂದಿದ್ದಾರೆ.

ಈ ಸಾಲಿನಲ್ಲಿ ಮಲವಳ್ಳಿ ಬಂಕೊಳ್ಳಿ ಕಾಂಕ್ರೇಟ್ ರಸ್ತೆ ಕಾಮಗಾರಿಯನ್ನು NPCIL ಕೈಗಾರವರು ನಿರ್ವಹಿಸುತ್ತಿದ್ದು ಸಂಬಂಧಪಟ್ಟ ಇಂಜಿನೀಯರ್ ಗಳು ಸರಿಯಾಗಿ ಸ್ಥಳಪರಿಶೀಲಿಸದೆ ಕಾಮಗಾರಿ ತೀರಾ ಕಳಪೆಯಾಗಿರುತ್ತದೆ.ಸ್ಥಳೀಯ ಜನಪ್ರತಿನಿಧಿಗಳು ಭೇಟಿಕೊಟ್ಟಾಗ ಕಾಮಗಾರಿ ಪರಿಶೀಲಿಸಿದಾಗ ಸ್ಥಳೀಯ ಮುಖಂಡರು ಗುತ್ತಿಗೆದಾರರ ಪರವಹಿಸಿ ಕಾಮಗಾರಿಯನ್ನು ಬಂದ್ ಮಾಡುವುದಾಗಿ ಬೆದರಿಕೆ ಹಾಕಿರುತ್ತಾರೆ.

ಕಾರಣ NPCIL ಕೈಗಾದ ಹಿರಿಯ ಅಧಿಕಾರಿಗಳು,ಸ್ಥಳೀಯ ಜನಪ್ರತಿನಿಧಿಗಳು,ಹಾಗೂ ಅರ್ಜಿದಾರರ ಸಮಕ್ಷಮ ಸ್ಥಳ ಪರಿಶೀಲಿಸಿ ಮತ್ತು ತಾಂತ್ರಿಕ ಪರಿಶೀಲನೆ ನಡೆಸಿ (ಗುಣಮಟ್ಟ ಪರಿಶೀಲನೆ) ಕಳಪೆ ಕಾಮಗಾರಿ ಮಾಡಿದವರ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿ ಸ್ಥಳೀಯರ ವಿನಂತಿಯಾಗಿದೆ.

ಮಾವಿನಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿದ್ರಮನೆ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕಳೆದ ಎರಡು ಮೂರು ವರ್ಷಗಳಿಂದ ಪೌಂಡೇಶನ್ ಮುಗಿಸಿ ಪಿಲ್ಲರ್ ಹಂತದಲ್ಲಿದ್ದು ಕಾಮಗಾರಿ ಅರ್ಧಕ್ಕೆ ನಿಂತಿರುತ್ತದೆ.ಹಳೆಯ ಶಾಲೆಯನ್ನು ಅರ್ಧ ಕಳಚಿದ್ದು ಮಳೆಗಾಲದಲ್ಲಿ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತದೆ.ಕಾರಣ ಈ ಶಾಲೆಯ ಕಟ್ಟಡವನ್ನು ಪೂರ್ಣಗೊಳಿಸಬೇಕಾಗಿ ವಿನಂತಿಸುತ್ತೇವೆ ಎಂದು
ಮಾವಿನಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಾದ
ಸತ್ಯನಾರಾಯಣ ಹೆಗಡೆ ರಾಘವೇಂದ್ರ ಭಟ್ಟ ತಂಗಜ್ಜಿಮನೆ ತಿಮ್ಮಣ್ಣ ಭಟ್ಟ ರಾಘವೇಂದ್ರ ಕುಣುಬಿ ಪರಮೇಶ್ವರಕುಣುಬಿ ಎಂಬುವರು ಮಧ್ಯಮದ ಮೂಲಕ ವಿನಂತಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *