Breaking News

ಕಾನೂನು ಸೇವಾ ಸಮಿತಿ ಸಂಯುಕ್ತಾಶ್ರಯದಲ್ಲಿ ವೈಟಿಎಸ್ಎಸ್ ನಲ್ಲಿ ಬಾಲ ಕಾರ್ಮಿಕ ದಿನಾಚರಣೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಬಾಲ ಕಾರ್ಮಿಕ ಪದ್ಧತಿಯನ್ನು ತಡೆಗಟ್ಟಬೇಕು. 18 ವರ್ಷ ದೊಳಗಿನ ಎಲ್ಲಾ ಮಕ್ಕಳಿಗೂ ಶಿಕ್ಷಣ ದೊರೆಯುವಂತಾಗಬೇಕು. ಯಾವುದೇ ಹೋಟೆಲ್ ಮತ್ತು ಕಾರ್ಕಾನೆಗಳಲ್ಲಿ ಕೂಡ ಕೆಲಸ ಮಾಡುತ್ತಿರುವ ಮಕ್ಕಳು ಕಂಡರೆ ಈ ಕುರಿತು ಸಂಬಧಿಸಿದ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಸಿವಿಲ್ ನ್ಯಾಯಾಧೀಶೆ ಲಕ್ಷ್ಮಿಬಾಯಿ ಬಸನಗೌಡ ಪಾಟೀಲ್ ಹೇಳಿದರು.


ಅವರು ಪಟ್ಟಣದ ವೈ.ಟಿ.ಎಸ್.ಎಸ್ ಸಭಾಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕಾ ಪಂಚಾಯತ್, ಅಭಿಯೋಜನಾ ಇಲಾಖೆ ಮತ್ತಿತರ ಇಲಾಖೆಗಳು ಹಾಗೂ ವೈ.ಟಿ.ಎಸ್.ಎಸ್ ಯಲ್ಲಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.


ತಾ.ಪಂ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ ಅಧ್ಯಕ್ಷತೆ ವಹಿಸಿದ್ದರು.
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಕುರಿತು ನ್ಯಾಯವಾದಿ ವಿ.ಟಿ.ಭಟ್ಟ ಉಪನ್ಯಾಸ ನೀಡಿದರು. ತಾಲೂಕಾ ವಕೀಲರ ಸಂಘದ ಅಧ್ಯಕ್ಷೆ ಸರಸ್ವತಿ ಭಟ್ಟ, ಸಹಾಯಕ ಸರ್ಕಾರಿ ಅಭಿಯೋಜಕಿ ಝೀನತ್ ಬಾನು ಶೇಖ್, ಬಿ.ಇ.ಓ ಎನ್.ಆರ್.ಹೆಗಡೆ, ಸಿ.ಡಿ.ಪಿ.ಓ ರಫೀಕಾ ಹಳ್ಳುರು, ಆರಕ್ಷಕ ಇಲಾಖೆಯ ಸುನೀಲ್, ವೈ.ಟಿ.ಎಸ್.ಎಸ್ ಪ್ರಾಂಶುಪಾಲ ಆನಂದ ಹೆಗಡೆ, ಅರೇಕಾಲಿಕ ನ್ಯಾಯಿಕ ಸ್ವಯಂ ಸೇವಕ ಗಣಪತಿ ನಾಯ್ಕ ಉಪಸ್ಥಿತರಿದ್ದರು.

ಅರೆಕಾಲಿಕ ಸ್ವಯಂ ಸೇವಕಿ ವೀಣಾ ಮಾನ್ತಿ ಪ್ರತಿಜ್ಞಾ ವಿಧಿ ಬೋಧಿಸಿದರು.
ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಕಾರ್ಮಿಕ ನಿರೀಕ್ಷಕ ಅಶೋಕ ವಡೆಯರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ವಂದಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಹುಟಕಮನೆ ಗುಡ್ಡ ನೆಲಸಮ ಪ್ರಕರಣ ನ್ಯಾಯಾಲಯಲ್ಲಿರುವಂತೆಯೆ ಮಾರಾಟಕ್ಕೆ ತೆರೆಮರೆಯ ಯತ್ನ.!!

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಸದ್ದುಮಾಡಿ ಬೆಂಗಳೂರಿನ ಭೂ ವ್ಯಾಜ್ಯಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ ಹುಟಕಮನೆ ಗುಡ್ಡ ನೆಲಸಮ ಅರಣ್ಯನಾಶ …

Leave a Reply

Your email address will not be published. Required fields are marked *