Breaking News

ಮಂಚಿಕೇರಿ ಕಾಲೇಜ್ ನಲ್ಲಿ ಆಚರಿಸಿದ ” ವಿಶ್ವ ಪರಿಸರ ದಿನ “

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಪರಿಸರ ಭಗವಂತ ನೀಡಿದ ಶ್ರೇಷ್ಟ ವರ ಅದನ್ನು ಕಾಪಾಡಿಕೊಂಡು ಬದುಕು ಸಾಗಿಸಿ ಮುಂದಿನ ಪೀಳಿಗೆಯ ಜನಾಂಗಕ್ಕೆ ವರ್ಗಾಹಿಸಬೇಕಿರುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಸರ್ವರಿಗು ವಿಶ್ವ ಪರಿಸರ ದಿನದ ಶುಭಾಶಯಗಳು ಎಂದು ಮಂಚಿಕೆರೆ ವಿಭಾಗದ ವಲಯ ಅರಣ್ಯಾಧಿಕಾರಿ ಅಮಿತ್ ಚೌಹಾಣ್ ಹೇಳಿದರು.


ಅವರು ಮಂಚಿಕೇರಿ ಪದವಿ ಪೂರ್ವ ಕಾಲೇಜ್, ಶೌರ್ಯ ವಿಪತ್ತು ತಂಡ ಮತ್ತು ವಲಯ ಅರಣ್ಯಾಧಿಕಾರಿ ಕಚೇರಿ ಮಂಚಿಕೇರಿ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜು ಆವಾರದಲ್ಲಿ ಹಮ್ಮಿ ಕೊಳ್ಳಲಾದ ವಿಶ್ವ ಪರಿಸರ ದಿನ ಆಚರರಣೆಯಲ್ಲಿ ವಿದ್ಯಾರ್ಥಿಗಳಿಗೆ ಸಸಿ ವಿತರಿಸಿ ಮಾತನಾಡಿದರು.


ಪ್ರಸ್ತುತ ಸನ್ನಿವೇಶದಲ್ಲಿ ನಮ್ಮ ದೇಶವು ಸೇರಿದಂತೆ ವಿಶ್ವದ ಬಹುತೇಕ ರಾಷ್ಟ್ರಗಳು ಪರಿಸರಕ್ಕೆ ಹೆಚ್ಚಿನ ಒತ್ತು ಕೊಟ್ಟು ಸಂರಕ್ಷಿಸುವ ನಿಟ್ಟಿನಲ್ಲಿ ವಿಧೇಷ ಪ್ರಯತ್ನ ಮಾಡುತ್ತಿದ್ದು. ಪರಿಸರ ನಾಶ ಮನುಕುಲದ ನಾಶ ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಆರ್.ಜಿ.ಹೆಗಡೆ ಬೆದೆಹಕ್ಲು, ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಸಂಯೋಜಕ ಹನುಮಂತ್ ನಾಯ್ಕ್ ವಿದ್ಯಾರ್ಥಿಗಳಿಗೆ ವಿವರಿಸಿದರು.


ಈ ಸಂದರ್ಭದಲ್ಲಿ ಕಾಲೇಜ್ ಪ್ರಿನ್ಸಿಪಾಲ್ ಡಿ.ಜಿ.ಹೆಗಡೆ , ವಾಡ್೯ ಸದಸ್ಯ ಗಣೇಶ್ ರೋಕಡೆ, ಉಪನ್ಯಾಸಕ ವೃಂದ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾಲೇಜು ಆವರಣದಲ್ಲಿ ಸಸಿ ನೆಟ್ಟರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *