
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಯಲ್ಲಾಪುರ : ಪಟ್ಟಣದ ತಾಲೂಕು ಪಂಚಾಯತ್ ಕಾರ್ಯಾಲಯದ ಗಾಂಧಿಕುಟೀರದ ಆವರಣದಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ್ ಯಲ್ಲಾಪುರ, ತಾಲೂಕು ಸ್ವೀಪ್ ಘಟಕ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸುವ ಕುರಿತು ಜಾಗೃತಿ ಮೂಡಿಸುವ ಜಾಥಾ ನಡೆಸಲಾಯಿತು.
ಜಾಗೃತಿ ಜಾಥವನ್ನು ಯಲ್ಲಾಪುರ ತಾಲೂಕು ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಮದಿಗಳು, , ತಾಲೂಕು ಪಂಚಾಯತ ಧಿಕಾರಿಗಳು ಮತ್ತು ಸಿಬ್ಬಂದಿಗ¼ ಜಾಥದಲ್ಲಿ ಪಾಲ್ಗೊಂಡು ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು.

Prathidvani Yellapura