Breaking News

ಸಂಪನ್ನಗೊಂಡ ಯಲ್ಲಾಪುರ ಬಸವೇಶ್ವರ ವರ್ಧಂತಿ ಉತ್ಸವ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ- ಪಟ್ಟಣದ ಬಸವೇಶ್ವರ ವೃತ್ತದಲ್ಲಿನ ಅತಿ ಪುರಾತನ ದೇವಾಲಯಗಳಲ್ಲಿ ಒಂದಾದ ಬಸವೇಶ್ವರ ದೇವಾಲಯದ ವರ್ಧಂತಿ ಉತ್ಸವ ಸತತ ಎರಡುದಿನಗಳಿಂದ ವಿವಿಧ ಪೂಜಾ ವಿಧಿವಿಧಾನದೊಂದಿಗೆ ಸಂಪನ್ನಗೊಂಡಿತು.
ಶುಕ್ರವಾರ ಮುಂಜಾನೆಯಿಂದಲೆ ಬಸವೇಶ್ವರ ದೇವರ ಸನ್ನಿದಾನದಲ್ಲಿ ಗಣಹಣೊಮ ನವಗ್ರಹ ಪೂಜೆ, ರುದ್ರ ಹೋಮ ನೆರವೇರಿಸಲಯಿತು. ಪೂರ್ಣಾಹುತಿಯೊಂದಿಗೆ ಮಹಾಮಂಗಳಸರತಿ ಪ್ರಸಾದ ವಿನಿಯೋಗ ನೆರವೇರಿತು. ದಿನ ಪೂರ್ತಿ ದೇವರ ಆರಾಧನೆ ಜರುಗಿತು.


ಶನಿವಾರ ರುದ್ರಾಭಿಶೇಕ, ವಿಶೇಷ ಹೂವಿನ ಅಲಂಕಾರ ಅನ್ನ ಸಂತರ್ಪಣೆ ನೆರವೇರಿತು. ಊರ ನಾಗರಿರು ಸುತ್ತಮುತ್ತಲ ಪ್ರದೇಶದ ಭಕ್ತರು ಬಸವೇಶ್ವರ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನಿತರಾದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *