Breaking News

ರೈತರ ಬೆಳೆ ಹಾನಿಗೆ ವಿಮೆ ರೂಪದಲ್ಲಿ ಬೆನ್ನಿಗೆ ನಿಂತ ರೈತಬಂಧು ಶಾಸಕ ಅರಬೈಲ್ ಶಿವರಾಮ್ ಹೆಬ್ಬಾರ್

ಜಿಲ್ಲೆಯ ರೈತರ ಖಾತೆಗೆ ಕೆ.ಡಿ.ಸಿ.ಸಿ ಬ್ಯಾಂಕ್ ಮೂಲಕ 41 ಕೋಟಿ ರೂಪಾಯಿ ಭತ್ತ ಹಾಗೂ ಗೋವಿನ ಜೋಳದ ಬೆಳೆ ಹಾನಿ ವಿಮೆ ಜಮಾ ಯಲ್ಲಾಪುರ ಕ್ಷೇತ್ರಕ್ಕೆ ಸಿಂಹಪಾಲು 35 ಕೋಟಿ ರೂಪಾಯಿ ವಿಮೆ ಬಿಡುಗಡೆ – ಹೆಬ್ಬಾರ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ, : ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಮಧ್ಯವರ್ತಿ ಬ್ಯಾಂಕಗೆ 2023 – 24 ನೇ ಸಾಲಿನ ಭತ್ತ ಹಾಗೂ ಗೋವಿನ ಜೋಳದ ಬೆಳೆ ಹಾನಿ ವಿಮೆ ಸುಮಾರು 41 ಕೋಟಿ ರೂಪಾಯಿ ಜಮಾವಾಗಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷರು ಹಾಗೂ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಪತ್ರಿಕಾ ಹೇಳಿಕೆಯನ್ನು ನೀಡಿದರು.

ಕಳೆದ ಸಾಲಿನಲ್ಲಿ ಮುಂಗಾರು ಮಳೆ ಕೊರತೆಯಿಂದ ಭತ್ತ,ಗೋವಿನ ಜೋಳ ಬೆಳೆಗೆ ಹಾನಿಯಾಗಿ ರೈತ ಸಮುದಾಯಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಈ ಬೆಳೆ ವಿಮೆಯ ಬಿಡುಗಡೆಯಿಂದಾಗಿ ಭತ್ತ, ಗೋವಿನ ಜೋಳ ಬೆಳೆದು ಜೀವನ ಜೀವನ ಸಾಗಿಸುತ್ತಿದ್ದ ಹಲವಾರು ರೈತರಿಗೆ ಆರ್ಥಿಕ ಶಕ್ತಿ ಬಂದಂತಾಗಿದೆ

ವಿಶೇಷವಾಗಿ ಈ ಸಾಲಿನಲ್ಲಿ ಬಿಡುಗಡೆಯಾದ ಬೆಳೆ ಹಾನಿ ವಿಮೆಯಲ್ಲಿ ನನ್ನ ಮತ ಕ್ಷೇತ್ರದ ಯಲ್ಲಾಪುರ ತಾಲೂಕಿಗೆ 84,85,610 ರೂಪಾಯಿ ಮುಂಡಗೋಡ ತಾಲೂಕಿಗೆ 18,41,53,186 ರೂಪಾಯಿ ಹಾಗೂ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ 15,90,59,753 ರೂಪಾಯಿ ( ಒಟ್ಟು 35 ಕೋಟಿ ರೂಪಾಯಿ ) ರೈತರಿಗೆ ಲಭಿಸಿರುವುದು ಅತ್ಯಂತ ಸಂತಸ ತಂದಿದೆ. ನನ್ನ ಕ್ಷೇತ್ರಕ್ಕೆ ಹೆಚ್ಚಿನ ವಿಮೆ ಪರಿಹಾರವನ್ನು ನೀಡಲು ಸಹಕರಿಸಿದ ಕೃಷಿ ಇಲಾಖೆಯ ಅಧಿಕಾರಿಗೆ, ವಿಮೆ ಕಂಪನಿಯ ಸಿಬ್ಬಂದಿಗಳಿಗೆ ಹಾಗೂ ಸರಕಾರಕ್ಕೆ ಕ್ಷೇತ್ರದ ರೈತರ ಪರವಾಗಿ ಅಭಿನಂದನೆಗಳು.

ಸರಕಾರದ ಮಟ್ಟದಲ್ಲಿ ವಿಶೇಷ ಪ್ರಯತ್ನವನ್ನು ನಡೆಸಿ ಈ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹೆಚ್ಚಿನ ಪರಿಹಾರವನ್ನು ಒದಗಿಲಾಗಿದೆ.ವಿಮೆ ಕಂಪನಿಯ ಮಾನದಂಡದ ಅನ್ವಯವಾಗಿ ಉತ್ತರಕನ್ನಡ ಜಿಲ್ಲೆಯ ಭತ್ತ ಹಾಗೂ ಗೋವಿನ ಜೋಳವನ್ನು ಬೆಳೆದ ರೈತರಿಗೆ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ನ ಮೂಲಕವಾಗಿ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿ ರೈತರ ಬ್ಯಾಂಕ್‌ ಖಾತೆಗೆ ಪರಿಹಾರದ ಮೊತ್ತವನ್ನು ನೇರವಾಗಿ ವರ್ಗಾಯಿಸಲಾಗುತ್ತಿದೆ ಎಂದು ತಿಳಿಸಿದರು.

ನನ್ನ ಸಾರ್ವಜನಿಕ ಬದುಕಿನಲ್ಲಿ ಅತಿ ಹೆಚ್ಚು ಬಡವರು, ಶ್ರಮಿಕರು,ರೈತರೊಂದಿಗೆ ಬದುಕಿ ಬೆಳೆದಿದ್ದೇನೆ ಆದ್ದರಿಂದ ಈ ದೇಶ ಕಾಯುವ ಸೈನಿಕ, ದೇಶಕ್ಕಾಗಿ ದುಡಿಯುವ ಕಾರ್ಮಿಕ, ದೇಶಕ್ಕೆ ಅನ್ನ ನೀಡುವ ಕೃಷಿಕ ಇವರೆಲ್ಲರ ಬದುಕು ಹಸನಾಗಿದ್ದರೆ ದೇಶ ಸುಭೀಕ್ಷ ವಾಗಿರಲು ಸಾದ್ಯ ಬೆಳೆ ಹಾನಿಯಿಂದ ನೊಂದ ರೈತರ ಕಣ್ಣೀರು ಒರೆಸುವುದು ನನ್ನ ಕರ್ತವ್ಯ ಅದನ್ನು ಪಾಲಿಸಿದ್ದೇನೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *