Breaking News

ಯಲ್ಲಾಪುರ ಲಯನ್ಸ್ ಕ್ಲಬ್ ಗೆ ಸುರೇಶ್ ಬೋರ್ಕರ್ ನೂತನ ಸಾರಥಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ತಾಲ್ಲೂಕಿನ ಕ್ರಿಯಾಶೀಲ ಸಂಘಟನೆಯಲ್ಲಿ ಒಂದಾದ ಪಟ್ಟಣದ ಲಯನ್ಸ ಕ್ಲಬ್ ನೂತನ ಪದಾಧಿಕಾರಿ ಮಂಡಳಿ ಅಸ್ತಿತ್ವಕ್ಕೆ ತರಲಾಗಿದೆ.


ಅರಣ್ಯ ಇಲಾಖೆಯಲ್ಲಿ ಸೇವೆಸಲ್ಲಿಸಿ ನಿವೃತ್ತಿ ಯಾದ ನಂತರ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದು ನಿವೃತ್ತ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಹಾಗು ತಾಲೂಕು ಪ್ರಮುಖರಾಗಿ ಸೇವೆ ಸಲ್ಲಿಸುತ್ತಿರುವ ಸುರೇಶ ಬೋರ್ಕರ್ ವರನ್ನು ಪ್ರತಿಷ್ಠಿತ ಸಂಸ್ಥೆ ಯಲ್ಲಿ ಒಂದಾದ ಲಯನ್ಸ್ ಕ್ಲಬ್ ಯಲ್ಲಸಪುರದ ನೂತನ ಅಧ್ಯಕ್ಷ ರಾಗಿ ಆಯ್ಕೆ ಮಾಡಿದ್ದು ಕಾರ್ಯದರ್ಶಿಯಾಗಿ ಎನ್‌ ಎ.ಭಟ್ , ಖಜಾಂಚಿಯಾಗಿ ಶೇಷಗಿರಿ ಪ್ರಭು ಆಯ್ಕೆಗೊಂಡಿರುತ್ತಾರೆ
ಪದಗ್ರಹಣ ಸಮಾರಂಭನ್ನು ಪಟ್ಟಣದ ಪೊಲೀಸ್ ಠಾಣೆ ಮುಂಬಾಗದ ನೂತನ ಹೊಟೆಲ್‌ ಶ್ರೀರಾಮ್ ರೆಸಿಡೆನ್ಸಿ ಯಲ್ಲಿ ದಿನಾಂಕ 15 ರಂದು ಹಮ್ಮಿಕೊಳ್ಳಲಾಗಿದೆ ಕಾರ್ಯಕ್ರಮದಲ್ಲಿ ಪದಗ್ರಹಣಾಧಿಕಾರಿಯಾಗಿ ಪಿಎಮ್‌ಜೆಎಫ್ Ln ಗಣಪತಿ ಎನ್ ನಾಯ್ಕ್, (ಪೋಸ್ಟ್ ಡಿಸ್ಟ್ರಿಕ್ಟ್ ಗೌರ್ನರ್) ಝೋನಲ್ ಚೇರ್ ಪರ್ಸನ್ Ln ಆರ್.ಹೆಚ್. ನಾಯಕ್ , ಪಾಲ್ಗೊಂಡು ನೂತನ ಪದಾಧಿಕಾರಗಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *