Breaking News

ಸಾಗುತಿದೆ…ಸಾಗುತಿದೆ… ಶಾಸಕ ಹೆಬ್ಬಾರ್ ಅಭಿವೃದ್ಧಿ ಕಾರ್ಯ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ: ಸರ್ಕಾರ ಯಾವುದೆ ಇರಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ. ಜನರ ಸಂಕಷ್ಟಕ್ಕೆ ಸ್ಪಂದಿಸುವ ಜನಪ್ರಿಯ ಶಾಸಕ ತುಂಬಾ ಹೆಬ್ಬಾರ್. ಈ ಕಾರಣದಿಂದ ಕ್ಷೇತ್ರದ ಅಭಿವೃದ್ಧಿ ಹಿನ್ನೆಲೆಯಲ್ಲಿ ವಿವಿಧ ಯೋಜನೆಗಳನ್ನು ತರುವಲ್ಲಿ ನಿಷ್ಣಾತರು ಹೆಬ್ಬಾರ್ ಅವರ ವಿಶೇಷವೆಂದರೆ ರಾಜ್ಯದಲ್ಲಿ ಆಡಳಿತ ಬಿಜೆಪಿ ಯದ್ದಾಗಿರಲಿ ಕಾಂಗ್ರೆಸ್ ನದ್ದಾಗಿರಲಿ ಎರಡರಲ್ಲು ಆತ್ಮೀಯತೆ ಉಳಿಸಿಕೊಂಡು ಬಂದಿದ್ದಾರೆ ಇದರಿಂದಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಎಂದಿಗು ಹಿನ್ನೆಡೆಯಾಗಿಲ್ಲ ಎಂಬುದು ಹೆಬ್ಬಾರ್ ಅಭಿಮಾನಿಗಳ ಮನದಾಳದ ಮಾತಾಗಿದೆ.

ಶಾಸಕ ಶಿವರಾಮ ಹೆಬ್ಬಾರ್  ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ  ಅಂಬೇಡ್ಕರ್ ವೃತ್ತದಿಂದ ಎ.ಪಿ.ಎಮ್.ಸಿ ವರೆಗೆ ಅಗಲಿಕರಣಗೊಳಿಸಿ ನಿರ್ಮಿಸಲಾದ  ನೂತನ ರಸ್ತೆಯನ್ನು ಉದ್ಘಾಟಿಸಿದರು.

ನಂತರ ಶ್ರೀ ಶಕ್ತಿ ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು‌.

     ತಾಲೂಕಿನ ಇಡಗುಂದಿ ಗ್ರಾಮದಲ್ಲಿ ನೂತನ ಪಶು ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀಕಾಂತ ಶೆಟ್ಟಿ, ವಿಕಾಸ ಅರ್ಬನ್ ಬ್ಯಾಂಕ್ ಅಧ್ಯಕ್ಷರಾದ ಮುರಳಿ ಹೆಗಡೆ ಸೇರಿದಂತೆ ಇಡಗುಂದಿ ಗ್ರಾಮ ಪಂಚಾಯತ ಉಪಾಧ್ಯಕ್ಷರು, ಸದಸ್ಯರು ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಇಂದು ಇಡಗುಂದಿ ಗ್ರಾಮ ಪಂಚಾಯತ ಸಭಾಂಗಣದಲ್ಲಿ ವಿವಿಧ ವಸತಿ ಯೋಜನೆ ಅಡಿಯಲ್ಲಿ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರವನ್ನು ವಿತರಿಸಿದರು.

ನಂತರ ಇಡಗುಂದಿ ಗ್ರಾಮ ಪಂಚಾಯತ ವ್ಯಾಪ್ತಿಯ ನಾಗರಿಕರ ಸೇವೆಗಾಗಿ ನೂತನ ಕಸವಿಲೇವಾರಿ ವಾಹನಕ್ಕೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

   ಮಾರ್ಚ್ 13 ರ ಬುಧವಾರವು ಶಾಸಕ ಹೆಬ್ಬಾರ್ ಅಭಿವೃದ್ಧಿ ಕಾರ್ಯಗಳು ಮುಂದುವರೆಯಿತು. ಪಟ್ಟಣದ ಎ.ಪಿ.ಎಮ್.ಸಿ ಪ್ರಾಂಗಣದಲ್ಲಿ ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ಸಿ‌.ಸಿ ರಸ್ತೆ, ಆರ್.ಸಿ.ಸಿ ಡ್ರೈನ್ ಹಾಗೂ ಕಾಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು.

       ಶಾಸಕರ ನಿಧಿ ಅಡಿಯಲ್ಲಿ  ವಿಶೇಷ ವಿಕಲಚೇತನ ಫಲಾನುಭವಿಗಳಿಗೆ ” ತ್ರಿ ಚಕ್ರ ಮೋಟಾರ್ ” ವಾಹನವನ್ನು ವಿತರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ನಂತರ ಸಮಾಜ ಕಲ್ಯಾಣ ಇಲಾಖೆ ಅಡಿ ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮ ಮತ್ತು ಅಂಬೇಡ್ಕರ್ ನಿಗಮದ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ನೀರಾವರಿ ಪಂಪ್ ಹಾಗೂ ಇತರೆ ಪರಿಕರಗಳು ವಿತರಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಗುರುರಾಜ್ ಎಮ್.ವಿಕಾಸ ಅರ್ಬನ್ ಬ್ಯಾಂಕ್ ಅಧ್ಯಕ್ಷ ಮುರಳಿ ಹೆಗಡೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

       ಮದ್ಯಾಹ್ನದ ನಂತರ ತಾಲೂಕಿನ ಹಿತ್ಲಳ್ಳಿಯ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿದರು.

ನಂತರ ಸಹಕಾರಿ ಸಂಘದ ಆವರಣದಲ್ಲಿ ಆಯೋಜಿಸಿದ್ದ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

    

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *